ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ಕುಕ್ಕೆ ಸುಬ್ರಹ್ಮಣ್ಯ–ಗುಂಡ್ಯ ರಾಜ್ಯ ಹೆದ್ದಾರಿಯ ಚೇರು ಎಂಬಲ್ಲಿ ಕಾರೊಂದು ಕಿರು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಉಳಿದ ನಾಲ್ವರು ಗಾಯಗೊಂಡ ಘಟನೆ ಸೋಮವಾರ ಸಂಭವಿಸಿದೆ. ರಾಮನಗರದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ನಾಗೇಶ್(32) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದು, ಬಾಲಕಿ ತೇಜಸ್ವಿನಿ(14) ಪುತ್ತೂರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾಳೆ. ಕಾರಿನಲ್ಲಿದ್ದ ಚಾಲಕ ರವಿ (30), ರಜನಿ (24), ರಂಜಿತ್ (24), ಅಚಿಂತ್ಯಾ (8) ಹಾಗೂ ಒಂದು ಪುಟ್ಟ ಮಗುವಿಗೆ ಗಾಯಗಳಾಗಿವೆ. ಇವರೆಲ್ಲ ಒಂದೇ ಕುಟುಂಬದವರಾಗಿದ್ದು, ಒಟ್ಟು ಏಳು ಮಂದಿ ರಾಮನಗರದಿಂದ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಹೊರಟಿದ್ದರು.