ಉಪ್ಪಿನಂಗಡಿ(ದಕ್ಷಿಣ ಕನ್ನಡ): ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿ ಸಮೀಪ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟರೆ, ಎಂಜಿರ ಎಂಬಲ್ಲಿ ಕಂಟೈನರ್ ಡಿಕ್ಕಿ ಹೊಡೆದು ಬೈಕ್ ಸವಾರನೋರ್ವ ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತ್ಯೇಕ ಅಪಘಾತ; ಇಬ್ಬರು ಸಾವು - two killed in road accident
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಘಟನೆಯಿಂದ ಹೆದ್ದಾರಿಯಲ್ಲಿ ಭಾರಿ ಪ್ರಮಾಣದ ಟ್ರಾಫಿಕ್ ಜಾಮ್ ಉಂಟಾಗಿದೆ.
![ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತ್ಯೇಕ ಅಪಘಾತ; ಇಬ್ಬರು ಸಾವು Two death in road accident at Mangaluru](https://etvbharatimages.akamaized.net/etvbharat/prod-images/768-512-12986337-thumbnail-3x2-mangaluru.jpg)
ಬಾಲಕ ತನ್ನ ತಾಯಿಯ ಜೊತೆ ತೆರಳುತ್ತಿದ್ದಾಗ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕಲ್ಲೇರಿ ನಿವಾಸಿ ಅದ್ವೀತ್ (16) ಮೃತ ಬಾಲಕ. ಅಂಗನವಾಡಿಯಲ್ಲಿ ಟೀಚರ್ ಆಗಿರುವ ಬಾಲಕನ ತಾಯಿ ಕೂಡ ಗಂಬೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಇದೇ ಹೆದ್ದಾರಿಯ ಎಂಜಿರ ಎಂಬಲ್ಲಿ ಬೈಕ್ ರೈಡ್ ಮಾಡುತ್ತಿದ್ದ ಯುವಕರ ತಂಡದಲ್ಲಿದ್ದ ಸವಾರನೊಬ್ಬನ ಬೈಕ್ಗೆ ಕಂಟೈನರ್ ಡಿಕ್ಕಿ ಹೊಡೆದಿದೆ. ಪರಿಣಾಮ ಸವಾರ ಘಟನಾ ಸ್ಥಳದಲ್ಲೇ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತ ಬೈಕ್ ಸವಾರನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.