ಮಂಗಳೂರು:ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣದ ಆರೋಪಿ ನ್ಯಾಯವಾದಿ ಕೆಎಸ್ಎನ್ ರಾಜೇಶ್ ಭಟ್ಗೆ ಸಹಕಾರ ನೀಡುತ್ತಿದ್ದ ಆರೋಪದ ಮೇಲೆ ಆತನ ಪತ್ನಿ ಹಾಗೂ ಅಚ್ಯುತ ಭಟ್ ಎಂಬಾತನ ಮಗ ಅಲೋಕ್ ಭಟ್ನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಆರೋಪಿ ನ್ಯಾಯವಾದಿ ಕೆಎಸ್ಎನ್ ರಾಜೇಶ್ ಭಟ್ ಕಾನೂನು ವಿದ್ಯಾರ್ಥಿನಿಗೆ ತನ್ನ ಕಚೇರಿಯಲ್ಲಿಯೇ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಅ.18ರಂದು ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ ಬಳಿಕದಿಂದ ಆರೋಪಿ ರಾಜೇಶ್ ಭಟ್ ತಲೆಮರೆಸಿಕೊಂಡಿದ್ದಾನೆ. ಇದೀಗ ಆತನಿಗೆ ಸಹಕಾರ ನೀಡುತ್ತಿದ್ದ ಆರೋಪದ ಮೇಲೆ ಪತ್ನಿ ಹಾಗೂ ಅಲೋಕ್ ಭಟ್ನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ನ್ಯಾಯವಾದಿ ಕೆಎಸ್ಎನ್ ರಾಜೇಶ್ ಭಟ್ ಈ ಹಿಂದೆ ಆರೋಪಿಗೆ ಸಹಕಾರ ನೀಡುತ್ತಿದ್ದ ಆರೋಪದ ಮೇಲೆ ಅನಂತ ಭಟ್ ಎಂಬಾತನನ್ನು ಬಂಧಿಸಲಾಗಿತ್ತು. ಈ ಮಧ್ಯೆ ಮತ್ತೋರ್ವ ಆರೋಪಿ ಅಚ್ಯುತ ಭಟ್ ಹಾಗೂ ಆತನ ಪುತ್ರ ಅಲೋಕ್ ಎಂಬಾತ ಕೂಡ ಆರೋಪಿ ರಾಜೇಶ್ ಭಟ್ಗೆ ಸಹಕಾರ ನೀಡುತ್ತಿದ್ದರು ಎಂದು ತಿಳಿದುಬಂದಿತ್ತು.
ಈ ಬಗ್ಗೆ ಮಾಹಿತಿ ಕಲೆ ಹಾಕಿರುವ ಪೊಲೀಸರು ಇಂದು ಅಚ್ಯುತ ಭಟ್ನ ಮಗ ಆಲೋಕ್ ಮತ್ತು ರಾಜೇಶ್ ಭಟ್ನ ಪತ್ನಿಯನ್ನು ಕೂಡ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ವೀರಪುತ್ರರ ದುರಂತ ಸಾವು: ಪಾರ್ಥಿವ ಶರೀರದ ಅಂತಿಮ ದರ್ಶನ, ಕುಟುಂಬಸ್ಥರಿಗೆ ನಮೋ ಸಾಂತ್ವನ