ಮಂಗಳೂರು (ದಕ್ಷಿಣ ಕನ್ನಡ):ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ.
ದಕ್ಷಿಣಕನ್ನಡದಲ್ಲಿ ಇಬ್ಬರಿಗೆ ಕೊರೊನಾ ದೃಢ: ಸೋಂಕಿತರ ಸಂಖ್ಯೆ 54ಕ್ಕೆ ಏರಿಕೆ
ದಕ್ಷಿಣ ಕನ್ನಡದಲ್ಲಿಂದು ಎರಡು ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಮಹಾರಾಷ್ಟ್ರದಿಂದ ಬಂದಿರುವ ಇಲ್ಲಿನ ಬಂಟ್ವಾಳದ ಕರೋಪಾಡಿಯ ಯುವಕ ಹಾಗೂ ಮಂಗಳೂರಿನ ಯೆಯ್ಯಾಡಿಯ ಓರ್ವ ಮಹಿಳೆಗೆ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕರೋಪಾಡಿ ಗ್ರಾಮದ 30 ವರ್ಷದ ಯುವಕನಿಗೆ ಕೊರೊನಾ ದೃಢಪಟ್ಟಿದೆ. ಇವರು ಮಹಾರಾಷ್ಟ್ರದ ರಾಯಗಢದಿಂದ ಪ್ರಯಾಣ ಮಾಡಿರುವ ಹಿನ್ನೆಲೆ ಹೊಂದಿದ್ದು, ಇವರನ್ನು ಕ್ವಾರಂಟೈನ್ ಮಾಡಲಾಗಿದೆ.
ಇನ್ನೊಬ್ಬರು ಮಂಗಳೂರಿನ ಯೆಯ್ಯಾಡಿಯ 55 ವರ್ಷದ ಮಹಿಳೆಯಾಗಿದ್ದಾರೆ. ಇವರಿಗೆ ತೀವ್ರ ಉಸಿರಾಟದ ತೊಂದರೆಯಿದ್ದ ಕಾರಣ ಪರೀಕ್ಷಿಸಿದಾಗ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ದ.ಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ. ಇದರಲ್ಲಿ 16 ಮಂದಿ ಗುಣಮುಖರಾಗಿದ್ದು, ಐವರು ಸಾವನ್ನಪ್ಪಿದ್ದಾರೆ. 33 ಮಂದಿ ಮಂಗಳೂರಿನ ಕೋವಿಡ್ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.