ಮಂಗಳೂರು :ಮೊಬೈಲ್ ಬಳಸದಂತೆ ಬುದ್ಧಿವಾದ ಹೇಳಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಇಬ್ಬರು ಸಹೋದರಿಯರನ್ನ ಚಿಕ್ಕಮಗಳೂರಿನಲ್ಲಿ ಮಂಗಳೂರಿನ ಬಜಪೆ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಬಜಪೆ ಗ್ರಾಮದ ಕೊಂಚಾರು ನಿವಾಸಿ ಮಾಮು ಎಂಬುವರ ಇಬ್ಬರು ಪುತ್ರಿಯರಾದ ಮುಬೀನಾ (22) ಮತ್ತು ಬುಶ್ರಾ (21) ಎಂಬುವರು ನಾಪತ್ತೆಯಾಗಿದ್ದರು. ಫೆಬ್ರವರಿ 7ರಂದು ರಾತ್ರಿ ಊಟ ಮಾಡಿ ಮಲಗಿದ್ದವರು, ಬೆಳಗ್ಗೆ ನೋಡಿದಾಗ ಮನೆಯಲ್ಲಿ ಇರಲಿಲ್ಲ. ಈ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.