ಪುತ್ತೂರು:ಕೋಳಿ ತ್ಯಾಜ್ಯ ವಿಲೇವಾರಿ ಗುಂಡಿ ನಿರ್ಮಾಣದ ವೇಳೆ ಮಣ್ಣಿನಡಿ ಸಿಲುಕಿದ್ದ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಅರ್ಲಪದವು ಸಮೀಪ ಕಡಮ್ಮಾಜೆಯಲ್ಲಿ ನಡೆದಿದೆ.
ಪುತ್ತೂರು: ಮಣ್ಣಿನಡಿ ಸಿಲುಕಿದ್ದ ಇಬ್ಬರು ಕಾರ್ಮಿಕರು ಸಾವು - ಮಣ್ಣಿನಡಿ ಸಿಲುಕಿದ್ದ ಇಬ್ಬರು ಕಾರ್ಮಿಕರು ಸಾವು
ಅರ್ಲಪದವು ಸಮೀಪ ಕಡಮ್ಮಾಜೆಯಲ್ಲಿ ಕೋಳಿ ತ್ಯಾಜ್ಯ ವಿಲೇವಾರಿ ಗುಂಡಿ ನಿರ್ಮಾಣದ ವೇಳೆ ಮಣ್ಣಿನಡಿ ಸಿಲುಕಿದ್ದ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ನಡೆದಿದೆ.
ಬಾಬು, ರವಿ ಮೃತ ಕೂಲಿ ಕಾರ್ಮಿಕರು. ಇವರು ಪಾರ್ಪಳ್ಳ ನಿವಾಸಿಗಳಾಗಿದ್ದಾರೆ. ಕಡಮ್ಮಾಜೆ ಹಾಜಿ ಅಬ್ದುಲ್ಲಾ ಎಂಬುವವರಿಗೆ ಸೇರಿದ ಕೋಳಿ ಫಾರ್ಮ್ನ ತ್ಯಾಜ್ಯ ವಿಲೇವಾರಿಗೆ ಜೆಸಿಬಿ ಮೂಲಕ ಹೊಂಡ ತೆಗೆಯುವ ಕೆಲಸ ನಡೆಸಲಾಗುತ್ತಿತ್ತು. ಈ ವೇಳೆ ಕಾರ್ಮಿಕರು ಆಕಸ್ಮಿಕವಾಗಿ ಹೊಂಡದಲ್ಲಿ ಬಿದ್ದಿದ್ದರು. ಇದೇ ವೇಳೆ ಪಕ್ಕದಲ್ಲಿಯೇ ಜೆಸಿಬಿ ಯಂತ್ರ ಮಣ್ಣು ಅಗೆಯುತ್ತಿರುವುದಿಂದ ಮಣ್ಣು ಜರಿದು ಹೊಂಡದೊಳಗೆ ಬಿದ್ದಿತ್ತು. ಪರಿಣಾಮ ಕಾರ್ಮಿಕರು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.
ಮಣ್ಣಿನಡಿಯಲ್ಲಿ ಹೂತು ಹೋಗಿದ್ದ ಕಾರ್ಮಿಕರ ಮೃತದೇಹಗಳನ್ನು ಪುತ್ತೂರು ಅಗ್ನಿಶಾಮಕ ಸಿಬ್ಬಂದಿ ಹಾಗೂ ಸಂಪ್ಯ ಪೊಲೀಸರು ಕಾರ್ಯಾಚರಣೆ ನಡೆಸಿ ಹೊರ ತೆಗೆದಿದ್ದು, ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.