ಮಂಗಳೂರು :ರಾಜ್ಯವನ್ನೇ ತಲ್ಲಣಗೊಳಿಸಿದ್ದ ಉಜಿರೆಯ ಬಾಲಕನ ಅಪಹರಣ ಪ್ರಕರಣದ ಆರೋಪಿಗಳಿಗೆ ದ.ಕ.ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಜಾಮೀನು ನಿರಾಕರಣೆ ಮಾಡಿ ಆದೇಶಿಸಿದ್ದಾರೆ.
ಪ್ರಕರಣದ ಹಿನ್ನೆಲೆ :ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿನ ಮನೆಯ ಮುಂದಿನ ರಸ್ತೆ ಬದಿಯಲ್ಲಿ ಆಡುತ್ತಿದ್ದ ಬಾಲಕ ಅನುಭವ್ನನ್ನು ಇಂಡಿಕಾ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಪಹರಿಸಿದ್ದರು.
ಬಳಿಕ ಬಾಲಕನ ಪೋಷಕರಿಗೆ ಕರೆ ಮಾಡಿ 17 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು. ಈ ಮೊತ್ತವನ್ನು ನಗದು ಅಥವಾ ಚೆಕ್ ಮೂಲಕ ನೀಡದೆ ಬಿಟ್ ಕಾಯಿನ್ ಮೂಲಕ ನೀಡುವಂತೆ ಅಪಹರಣಕಾರರು ಒತ್ತಾಯಿಸಿದ್ದರು.