ಮಂಗಳೂರು:ಪತ್ನಿ ಅನೈತಿಕ ಸಂಬಂಧ ಹೊಂದಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ಪತಿ ಆಕೆಯನ್ನು ಹತ್ಯೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೋಮೇಶ್ವರ ಗ್ರಾಮದ ಪಿಲಾರ್ನ ಪಂಜಂದಾಯ ದೇವಸ್ಥಾನದ ಸಮೀಪ ಈ ಘಟನೆ ನಡೆದಿದೆ.
ಶೋಭ (46) ಕೊಲೆಗೀಡಾದ ಪತ್ನಿ. ಶಿವಾನಂದ (55) ಆತ್ಮಹತ್ಯೆ ಮಾಡಿಕೊಂಡಿರುವ ಪತಿ. ಅನುಮಾನ ಸ್ವಭಾವದ ಶಿವಾನಂದ ಪತ್ನಿ ಶೋಭ ಜೊತೆಗೆ ಸಣ್ಣ ಪುಟ್ಟ ವಿಷಯಕ್ಕೂ ಪ್ರತಿದಿನ ಜಗಳವಾಡುತ್ತಿದ್ದರು. ಹಲವರ ಜೊತೆಗೆ ಅನೈತಿಕ ಸಂಬಂಧ ಇದೆ ಎಂದು ಪತ್ನಿಯ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಿದ್ದರು. ಗುರುವಾರ ಬೆಳಗ್ಗೆ ಕೂಡ ಪತ್ನಿಯೊಂದಿಗೆ ಜಗಳವಾಡಿದ್ದರು ಎನ್ನಲಾಗ್ತಿದೆ.