ಉಳ್ಳಾಲ: ಕಳೆದ ಎರಡು ವರ್ಷಗಳಿಂದ ನ್ಯಾಯಾಲಯದಲ್ಲಿ ತಡೆಯಿದ್ದ ಹಿನ್ನೆಲೆಯಲ್ಲಿ ಬಾಕಿ ಉಳಿದಿದ್ದ ಉಳ್ಳಾಲ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಇಂದು ನಡೆದಿದ್ದು, ಅಧ್ಯಕ್ಷೆಯಾಗಿ ಕಾಂಗ್ರೆಸ್ನ ಚಿತ್ರಾ ಚಂದ್ರಕಾಂತ್ ಮತ್ತು ಉಪಾಧ್ಯಕ್ಷರಾಗಿ ಐಯೂಬ್ ಮಂಚಿಲ ಆಯ್ಕೆಯಾಗಿದ್ದಾರೆ.
ಉಳ್ಳಾಲ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ - ಉಳ್ಳಾಲ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನ ಕಾಂಗ್ರೆಸ್ ಸ್ಥಾನ
ಕಾಂಗ್ರೆಸ್ 13, ಪಕ್ಷೇತರ 2 ಹಾಗೂ ಶಾಸಕ ಯು.ಟಿ.ಖಾದರ್ ಅವರ ಬೆಂಬಲದಿಂದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ ಬಂದಿದೆ.
![ಉಳ್ಳಾಲ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ Ullal Municipal Council](https://etvbharatimages.akamaized.net/etvbharat/prod-images/768-512-9404360-864-9404360-1604322186539.jpg)
ಉಳ್ಳಾಲ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನ ಕಾಂಗ್ರೆಸ್ ತೆಕ್ಕೆಗೆ
ಉಳ್ಳಾಲ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನ ಕಾಂಗ್ರೆಸ್ ತೆಕ್ಕೆಗೆ
ಇಂದು ಸಂಜೆ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದಿದೆ. ಎಸ್ಡಿಪಿಐನಿಂದ ಜರೀನಾ ರವೂಫ್ ಹಾಗೂ ಬಿಜೆಪಿಯಿಂದ ರೇಷ್ಮಾ ಜಗದೀಶ್ ಅಧ್ಯಕ್ಷ ಸ್ಥಾನಕ್ಕೆ ಹಾಗೂ ರಮೀಜ್ ಕೋಡಿ ಮತ್ತು ಜೆಡಿಎಸ್ನ ಜಬ್ಬಾರ್ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು.
TAGGED:
Ullal Municipal Council news