ಉಳ್ಳಾಲ: ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಒದಗಿಸುವಲ್ಲಿ ಪುರಸಭೆ ಸದಾ ಸಿದ್ಧ ಎಂದು ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ವಾಣಿ ಆಳ್ವ ಹೇಳಿದರು.
ಉಳ್ಳಾಲ: ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಪೌರ ಕಾರ್ಮಿಕರಿಗೆ ಪಿಪಿಇ ಕಿಟ್ ವಿತರಣೆ - ಸೋಮೇಶ್ವರ ಪುರಸಭೆ
ಸ್ವಾತಂತ್ರ್ಯೋತ್ಸವ ಪ್ರಯುಕ್ತ ಸೋಮೇಶ್ವರ ಪುರಸಭೆಯಲ್ಲಿ ಪೌರಕಾರ್ಮಿಕರಿಗೆ ಪಿಪಿಇ ಕಿಟ್ಗಳನ್ನು ವಿತರಿಸಲಾಯಿತು.
ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಪೌರ ಕಾರ್ಮಿಕರಿಗೆ ಪಿಪಿಇ ಕಿಟ್ ವಿತರಣೆ
ಸೋಮೇಶ್ವರ ಪುರಸಭೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಕಾವೇರಿ ಲಯನ್ಸ್ ಕ್ಲಬ್ ಸಹಕಾರದೊಂದಿಗೆ ಪುರಸಭೆ ವಠಾರದಲ್ಲಿ ವನಮಹೋತ್ಸವ ಮತ್ತು ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಿ ಅವರು ಮಾತನಾಡಿದರು. ಪುರಸಭೆಗೆ ಹೊಸತಾಗಿ ಸೇರ್ಪಡೆಗೊಂಡ ಐವರು ಪೌರ ಕಾರ್ಮಿಕರಿಗೆ ಪಿಪಿಇ ಕಿಟ್ ಮತ್ತು ಸುರಕ್ಷಾ ಧಿರಿಸುಗಳನ್ನು ವಿತರಿಸಲಾಯಿತು.
ಈ ಸಂದರ್ಭ ಲಯನ್ಸ್ ಕ್ಲಬ್ ಕಾರ್ಯದರ್ಶಿ ಭಾರತಿ ರಾವ್, ಪಿಆರ್ಓ ಅನುರಾಧ ಶರತ್, ಹಿತಾಕ್ಷಿ ಪುರುಷೋತ್ತಮ್ ಉಪಸ್ಥಿತರಿದ್ದರು.