ಮಂಗಳೂರು: ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ದ.ಕ.ಜಿಲ್ಲಾ ವುಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಮಿನಿ ವಿಧಾನಸೌಧದ ಮುಂದೆ ಒಲೆ ಉರಿಸುವ ಮೂಲಕ ಅಣಕು ಪ್ರತಿಭಟನೆ ನಡೆಸಲಾಯಿತು.
ಅಡುಗೆ ಅನಿಲ ಬೆಲೆ ಏರಿಕೆಗೆ ಖಂಡನೆ: ಮಿನಿ ವಿಧಾನಸೌಧದ ಮುಂದೆ ಒಲೆ ಹೊತ್ತಿಸಿ ಪ್ರತಿಭಟನೆ - ಸಿಎಎ, ಎನ್ಆರ್ಸಿ ಮತ್ತು ಎನ್‍ಪಿಆರ್
ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಅಣಕು ಪ್ರತಿಭಟನೆ.
ಪ್ರತಿಭಟನಾಕಾರರನ್ನು ಉದ್ದೇಶಿಸಿ ನಸ್ರಿಯಾ ಬೆಳ್ಳಾರೆ ಮಾತನಾಡಿ, ಒಂದೇ ದಿನದಲ್ಲಿ ಅಡುಗೆ ಅನಿಲ ಬೆಲೆ ಪ್ರತಿ ಸಿಲಿಂಡರ್ಗೆ 145.5 ರೂ. ಏರಿಕೆಯಾಗಿದೆ. ಸಾಮಾನ್ಯರಿಗೆ ಹೊರಲಾರದ ಭಾರವಾಗಿದೆ. ಹಣದುಬ್ಬರ, ದಿನಬಳಕೆ ಸಾಮಾಗ್ರಿಗಳ ಬೆಲೆಯೇರಿಕೆಯಿಂದ ಈಗಾಗಲೇ ತತ್ತರಿಸುತ್ತಿರುವ ಜನತೆಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದರಿಂದ ಕೇಂದ್ರ ಸರ್ಕಾರ ಜನಪರವಾಗಿಲ್ಲ ಎಂಬುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಎಎ, ಎನ್ಆರ್ಸಿ ಮತ್ತು ಎನ್‍ಪಿಆರ್ ವಿರೋಧಿಸಿ ಸೋಮವಾರ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿವಿಯಿಂದ ಸಂಸತ್ ಭವನಕ್ಕೆ ಪ್ರತಿಭಟನಾ ರ‍್ಯಾಲಿ ನಡೆಸಿದ ವಿದ್ಯಾರ್ಥಿಗಳು ಮತ್ತು ನಾಗರಿಕರ ಮೇಲೆ ದೆಹಲಿ ಪೊಲೀಸರು ಅತ್ಯಂತ ಕ್ರೂರವಾಗಿ ಲಾಠಿ ಪ್ರಹಾರ ನಡೆಸಿರುವುದು ಖಂಡನಾರ್ಹ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.