ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಮೂವರ ತಂಡವೊಂದು ತಲ್ವಾರ್ನಿಂದ ದಾಳಿ ನಡೆಸಿರುವ ಘಟನೆ ನಡೆದಿದೆ.
ಗ್ರಾಪಂ ಅಧ್ಯಕ್ಷರ ಮೇಲೆ ತಲ್ವಾರ್ನಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ಪರಾರಿ - ಗ್ರಾ.ಪಂ. ಅಧ್ಯಕ್ಷನ ಮೇಲೆ ಮೂವರು ವ್ಯಕ್ತಿಗಳಿಂದ ಹಲ್ಲೆ ಲೆಟೆಸ್ಟ್ ನ್ಯೂಸ್
ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ರಝಾಕ್ ಕುಕ್ಕಾಜೆ ಎಂಬುವವರ ಮೇಲೆ ಮೂವರಿಂದ ಹಲ್ಲೆ. ಬಂಟ್ವಾಳ ತಾಲೂಕಿನ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇರಾ ಗ್ರಾ.ಪಂ. ಅಧ್ಯಕ್ಷನ ಮೇಲೆ ಮೂವರು ವ್ಯಕ್ತಿಗಳಿಂದ ಹಲ್ಲೆ
ಇರಾ ಗ್ರಾಪಂ ಅಧ್ಯಕ್ಷ ರಝಾಕ್ ಕುಕ್ಕಾಜೆ ಹಲ್ಲೆಗೊಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ರಝಾಕ್ ಕುಕ್ಕಾಜೆ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಚಿ ಗ್ರಾಮದ ಮಂಚಿ ಕಟ್ಟೆಯಲ್ಲಿರುವ ಕ್ಲಿನಿಕ್ಗೆರಾತ್ರಿ ಹೋದ ವೇಳೆ ಬೈಕ್ನಲ್ಲಿ ಬಂದ ಮೂವರ ತಂಡ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದೆ.
ಮಸೀದಿ ಹಾಗೂ ವೈಯಕ್ತಿಕ ವಿಚಾರದಲ್ಲಿ ಈ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.