ಕರ್ನಾಟಕ

karnataka

ETV Bharat / state

ಮಂಗಳೂರಿನಲ್ಲಿ ಭುಗಿಲೆದ್ದ ಹಿಂಸಾಚಾರ, ಪೊಲೀಸರಿಂದ ಲಾಠಿ ಪ್ರಹಾರ - Lathe charge by police in Mangalore

ರಾಜ್ಯದಲ್ಲಿ ಎನ್‌ಆರ್‌ಸಿ ಹಾಗೂ ಪೌರತ್ವ ಕಾಯ್ದೆಗೆ ಸಾಕಷ್ಟು ಅಪಸ್ವರ ಕೇಳಿ ಬಂದಿದ್ದು, ಕಡಲೂರು ಮಂಗಳೂರಿನಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ.

ssss
ಮಂಗಳೂರಿನಲ್ಲಿ ಪೌರತ್ವ ಕಿಚ್ಚು

By

Published : Dec 19, 2019, 4:31 PM IST

ಮಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ನಗರದಲ್ಲಿ ಏಕಾಏಕಿ ನಡೆದ ಹಿಂಸಾಚಾರದ ಹಿನ್ನೆಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಕೆಲ ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.

ಕೇಂದ್ರ ಸರ್ಕಾರದ ಎನ್‌ಆರ್‌ಸಿ ಹಾಗೂ ಸಿಎಎ ಜಾರಿ ಹಿನ್ನೆಲೆ ಅಹಿತಕರ ಘಟನೆ ನಡೆಯದಂತೆ ದ.ಕ.ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿತ್ತು. ಆದರೂ ಉದ್ರಿಕ್ತರ ಗುಂಪೊಂದು ಏಕಾಏಕಿ ನಡೆಸಿದ ಗಲಾಟೆಯಿಂದ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ‌ ನಡೆಸಿ ಗುಂಪು ಚದುರಿಸಿದ್ದಾರೆ.

ಮಂಗಳೂರಿನಲ್ಲಿ ಪೌರತ್ವದ ಕಿಚ್ಚು, ಲಾಠಿ ಪ್ರಹಾರ
ಈ ಸಂದರ್ಭದಲ್ಲಿ ಉದ್ರಿಕ್ತ ಗುಂಪೊಂದು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದೆ. ಪರಿಣಾಮ ಕೆಎಸ್‌ಆರ್‌ಟಿಸಿ ಬಸ್ , ಪೊಲೀಸ್ ವ್ಯಾನ್, ಸ್ಟೇಟ್ ಬ್ಯಾಂಕ್​ನ ಗಾಜು ಜಖಂಗೊಂಡಿದ್ದು ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

ABOUT THE AUTHOR

...view details