ಬಂಟ್ವಾಳ (ದಕ್ಷಿಣ ಕನ್ನಡ): ತಾಲೂಕಿನ ಫರಂಗಿಪೇಟೆಯ ಸೇವಾಂಜಲಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಮಂಗಳೂರು ಶಾಸಕ ಯು.ಟಿ. ಖಾದರ್ ತಮ್ಮ ಸ್ವಂತ ಹಣದಲ್ಲಿ ತುಂಬೆ, ಮೇರಮಜಲು, ಪುದು ಮತ್ತು ಕಳ್ಳಿಗೆ ಕ್ಲಸ್ಟರ್ ಮಟ್ಟದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಅಕ್ಷರ ದಾಸೋಹ ಕಾರ್ಮಿಕರಿಗೆ ದಿನಸಿ ಪದಾರ್ಥಗಳ ಕಿಟ್ ವಿತರಿಸಿದರು.
ದ.ಕ. ಜಿಲ್ಲೆಯಲ್ಲಿ ಐವರು ಕೊರೊನಾಗೆ ಬಲಿಯಾಗಿದ್ದು ದುಃಖದ ಸಂಗತಿ: ಖಾದರ್ - ಮಂಗಳೂರು ಶಾಸಕ ಯು.ಟಿ.ಖಾದರ್ ದಿನಸಿ ವಿತರಣೆ ಸುದ್ದಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐವರು ಕೊರೊನಾದಿಂದ ಸಾವನ್ನಪ್ಪಿರುವುದು ದುಖಃಕರ ವಿಚಾರವೆಂದು ಮಂಗಳೂರು ಶಾಸಕ ಯು.ಟಿ. ಖಾದರ್ ಬೇಸರ ವ್ಯಕ್ತಪಡಿಸಿದರು.
ಮಂಗಳೂರು ಶಾಸಕ ಯು.ಟಿ.ಖಾದರ್ ದಿನಸಿ ವಿತರಣೆ
ಈ ವೇಳೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈವರಗೆ ಐದು ಮಂದಿ ಕೊರೊನಾ ಸೋಂಕು ತಗುಲಿ ಸಾವನ್ನಪ್ಪಿದ್ದಾರೆ. ಇದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಮುಂದಿನ ದಿನಗಳಗಲ್ಲಿ ಮರುಕಳಿಸದಿರಲಿ ಎಂದರು.
ಜಿ.ಪಂ. ಮಾಜಿ ಸದಸ್ಯ ಉಮ್ಮರ್ ಫಾರೂಕ್, ಪುದು ಗ್ರಾ.ಪಂ. ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಸೇವಾಂಜಲಿ ಟ್ರಸ್ಟ್ನ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜಾ, ಉದ್ಯಮಿ ಮಹಾಬಲ ರೈ, ಪ್ರಮುಖರಾದ ಭಾಸ್ಕರ್ ರೈ, ಮೊಹಮ್ಮದ್ ಮೋನು ಫರಂಗಿಪೇಟೆ, ಫೈಝಲ್ ಅಮ್ಮೆಮ್ಮರ್, ವೃಂದ ಪೂಜಾರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Last Updated : May 15, 2020, 8:01 PM IST