ಪುತ್ತೂರು:ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಎರಡನೇ ಜಿಲ್ಲಾ ಕಚೇರಿಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ಡಾ. ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿದರು.
ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ಡಾ. ವೀರೇಂದ್ರ ಹೆಗ್ಗಡೆ ಪುತ್ತೂರು ಎಪಿಎಂಸಿ ರಸ್ತೆಯ ಬಳಿ ಕಚೇರಿಯನ್ನು ನಿರ್ಮಾಣ ಮಾಡಲಾಗಿದೆ. ಉದ್ಘಾಟನೆ ಬಳಿಕ ಮಾತನಾಡಿ ಧರ್ಮಾಧಿಕಾರಿ, ಭೋಗ ಜೀವನದ ಬದಲು, ಕರ್ಮ ಜೀವನ ಆಗಬೇಕು. ಇದು ಸ್ವಸಹಾಯ ಸಂಘದಿಂದ ಸಾಧ್ಯ. ಒಳ್ಳೆಯ ಭವಿಷ್ಯಕ್ಕಾಗಿ ಗ್ರಾಮೀಣ ಭಾಗದಲ್ಲಿ ಸ್ವಸಹಾಯ ಸಂಘ ಉತ್ತಮ ಫಲ ಕೊಡುತ್ತಿದೆ ಎಂದರು.
ಇದನ್ನೂ ಓದಿ:ಬೆಳ್ತಂಗಡಿ : ಸೋಮಾವತಿ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್,ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಡಾ.ಎಂಕೆ ಪ್ರಸಾದ್, ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಎಲ್. ಹೆಚ್.ಮಂಜುನಾಥ್, ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಎನ್.ಎ ರಾಮಚಂದ್ರ, ತಾಲೂಕು ಅಧ್ಯಕ್ಷ ಮಹಾಬಲ ರೈ ವಳತ್ತಡ್ಕ, ಪ್ರಗತಿಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ಅಧ್ಯಕ್ಷ ಬಾಲಕೃಷ್ಣ ಗೌಡ ಹಾರ್ಪಳ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.