ಬಂಟ್ವಾಳ (ದಕ್ಷಿಣ ಕನ್ನಡ):ಕ್ವಾರಂಟೈನ್ ಉಲ್ಲಂಘನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಂಟ್ವಾಳ ತಾಲೂಕಿನ ವಿವಿಧ ಠಾಣೆಗಳಲ್ಲಿ ಇಂದು ಒಟ್ಟು 8 ಪ್ರಕರಣಗಳು ದಾಖಲಾಗಿವೆ.
ಕ್ವಾರಂಟೈನ್ ನಿಯಮ ಉಲ್ಲಂಘನೆ: ಬಂಟ್ವಾಳದ ವಿವಿಧ ಠಾಣೆಗಳಲ್ಲಿ 8 ಪ್ರಕರಣ ದಾಖಲು - dakshinakannada news
ಕ್ವಾರಂಟೈನ್ನಲ್ಲಿದ್ದು, ಹೊರಗಡೆ ತಿರುಗಾಟ ನಡೆಸುತ್ತಿರುವವರ ವಿರುದ್ಧ ಪ್ರಕರಣ ದಾಖಲಿಸುವಂತೆ ಜಿಲ್ಲಾಡಳಿತ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿತ್ತು. ಅದರಂತೆ ಬಂಟ್ವಾಳ ತಾಲೂಕಿನ ವಿವಿಧ ಠಾಣೆಗಳಲ್ಲಿಂದು ಒಟ್ಟು 8 ಪ್ರಕರಣ ದಾಖಲಾಗಿವೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ 5, ಪುಂಜಾಲಕಟ್ಟೆ ಠಾಣೆ 1, ಬಂಟ್ವಾಳ ನಗರ ಹಾಗೂ ವಿಟ್ಲ ಠಾಣೆಯಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿದೆ. ಕ್ವಾರಂಟೈನ್ನಲ್ಲಿದ್ದು, ಹೊರಗಡೆ ತಿರುಗಾಟ ನಡೆಸುತ್ತಿರುವವರ ವಿರುದ್ಧ ಪ್ರಕರಣ ದಾಖಲಿಸುವಂತೆ ಜಿಲ್ಲಾಡಳಿತ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿತ್ತು.
ಕೊರೊನಾ ಸೋಂಕಿತರ ಸಂಪರ್ಕಕ್ಕೆ ಬಂದವರು, ಹೊರ ರಾಜ್ಯಗಳಿಂದ ಬಂದವರು, ವಿದೇಶಗಳಿಂದ ಬಂದವರಿಗೆ ನಿರ್ದಿಷ್ಟ ದಿನಗಳವರೆಗೆ ಕ್ವಾರಂಟೈನ್ ವಿಧಿಸಿ ಸೂಕ್ತ ವಸತಿ ವ್ಯವಸ್ಥೆಯನ್ನೂ ಮಾಡಲಾಗಿದೆ. ಇದನ್ನು ಉಲ್ಲಂಘಿಸಿ ಹೊರಗಡೆ ಮನಸೋ ಇಚ್ಛೆ ತಿರುಗಾಡುವವರ ವಿರುದ್ಧ ಈಗ ಪ್ರಕರಣ ದಾಖಲಾಗಿದೆ.