ಬೆಳ್ತಂಗಡಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸಂತಾಪ ಸೂಚಿಸಿದ್ದಾರೆ.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಸಂತಾಪ ಸೂಚಿಸಿದ ವೀರೇಂದ್ರ ಹೆಗ್ಗಡೆ - former President Pranab Mukherjee death
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸಂತಾಪ ಸೂಚಿಸಿದ್ದಾರೆ.
Virender Hegde gave condoles
ಭಾರತದ ನೈತಿಕತೆಯನ್ನು ಉಳಿಸಿದ ಮೇರು ವ್ಯಕ್ತಿತ್ವ ಪ್ರಣಬ್ ಮುಖರ್ಜಿ ಅವರದ್ದಾಗಿದೆ. ಈ ಹಿಂದೆ ಕೇಂದ್ರ ಸಂಪುಟದಲ್ಲಿ ಸಚಿವರಾಗಿದ್ದು, ಆಡಳಿತಾತ್ಮಕವಾಗಿ ಅಪಾರ ಅನುಭವ ಹೊಂದಿದ ಅವರು ಭಾರತದ ರಾಷ್ಟ್ರಪತಿಯಾಗಿ ಉತ್ತಮ ಕಾರ್ಯ ನಿರ್ವಹಿಸಿದ್ದರು.
2015 ರಲ್ಲಿ ಅವರಿಂದ ನಾನು ಪದ್ಮವಿಭೂಷಣ ಪ್ರಶಸ್ತಿ ಸ್ವೀಕರಿಸಿರುವುದು ಸ್ಮರಣೀಯವಾಗಿದೆ ಎಂದು ಸ್ಮರಿಸಿಕೊಂಡ ಧರ್ಮಾಧಿಕಾರಿಗಳು, ಅವರ ಆತ್ಮಕ್ಕೆ ಚಿರಶಾಂತಿ ದೊರಕಲೆಂದು ಶ್ರೀ ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದರು.