ಮಂಗಳೂರು: ಬೆಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸಬೇಕು. ಜೊತೆಗೆ ಎಸ್‌ಡಿಪಿಐ ಸಂಘಟನೆಯನ್ನು ನಿಷೇಧಿಸಿ ಎಂದು ಮಂಗಳೂರು ವಿಶ್ವ ಹಿಂದೂ ಪರಿಷತ್ ಸದಸ್ಯರು ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.
ಎಸ್‌ಡಿಪಿಐ ನಿಷೇಧಿಸುವಂತೆ ವಿಶ್ವ ಹಿಂದೂ ಪರಿಷತ್ ಮನವಿ - Vishwa Hindu parishath
ಬೆಂಗಳೂರು ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿಯಲ್ಲಿ ನಡೆದ ಹಿಂಸಾಚಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಜೊತೆಗೆ, ಎಸ್‌ಡಿಪಿಐ ಸಂಘಟನೆಯನ್ನು ನಿಷೇಧಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಗೃಹ ಸಚಿವರಿಗೆ ಮನವಿ ನೀಡಿದೆ.
![ಎಸ್‌ಡಿಪಿಐ ನಿಷೇಧಿಸುವಂತೆ ವಿಶ್ವ ಹಿಂದೂ ಪರಿಷತ್ ಮನವಿ Mangalore](https://etvbharatimages.akamaized.net/etvbharat/prod-images/768-512-kn-mng-03-vhp-photo-7202146-12082020153706-1208f-1597226826-983.jpg)
Mangalore
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ವಿಹೆಚ್‌ಪಿ ಮುಖಂಡರು ಮನವಿ ನೀಡಿದ್ದಾರೆ.
ಈ ಘಟನೆಯ ಹಿಂದೆ ರಾಷ್ಟ್ರದ್ರೋಹಿ ಸಂಘಟನೆ ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾದ ಐಎಸ್ಐ ಮತ್ತು ಭಯೋತ್ಪಾದಕರ ಕೈವಾಡವಿದೆ. ಹಾಗಾಗಿ, ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದ ಮೂಲಕ ತನಿಖೆ ನಡೆಸುವಂತೆ ಒತ್ತಾಯಿಸಲಾಗಿದೆ.