ಕಡಬ:ಇಲ್ಲಿನ ರಾಮಕುಂಜ ಶ್ರೀರಾಮಕುಂಜೇಶ್ವರ ವಿದ್ಯಾಸಂಸ್ಥೆಗಳ ಆವರಣದಲ್ಲಿ ಶ್ರೀವಿಶ್ವೇಶತೀರ್ಥ ಸ್ವಾಮೀಜಿಗಳ ಪುತ್ಥಳಿ ಮತ್ತು ಅವರ ಸ್ಮರಣಾರ್ಥ ನಿರ್ಮಿಸಲಾಗಿರುವ ಧ್ಯಾನಕೇಂದ್ರವನ್ನು ಲೋಕಾರ್ಪಣೆ ಮಾಡಲಾಯಿತು.
ರಾಮಕುಂಜ ಗ್ರಾಮದಲ್ಲಿ ದಶಕಗಳ ಹಿಂದೆಯೇ ಪೇಜಾವರ ಶ್ರೀಗಳು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪನೆ ಮಾಡಿ ಬಡ ಮಕ್ಕಳಿಗೆ ಪ್ರಾಥಮಿಕ, ಪ್ರೌಢ ಹಾಗೂ ಪದವಿಯವರೆಗಿನ ಉತ್ತಮ ಶಿಕ್ಷಣದ ವ್ಯವಸ್ಥೆ ಮಾಡಿದ್ದಾರೆ. ಪ್ರಸ್ತುತ ಇಲ್ಲಿ ಎರಡೂವರೆ ಸಾವಿರ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಇದೀಗ ರಾಮಕುಂಜೇಶ್ವರ ವಿದ್ಯಾಸಂಸ್ಥೆಗಳ ಆವರಣದಲ್ಲಿ ಪೂಜ್ಯ ಶ್ರೀಗಳ ಪುತ್ಥಳಿ ಮತ್ತು ಧ್ಯಾನಕೇಂದ್ರ ನಿರ್ಮಿಸಮಿಸಲಾಗಿದೆ.