ಬಂಟ್ವಾಳ:ಕೊರೊನಾ ಪಾಸಿಟಿವ್ ಬಂದಿದ್ದ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ.
ಕೊರೊನಾ ಪಾಸಿಟಿವ್ ಬಂದಿದ್ದ ವಿಟ್ಲ ಪೊಲೀಸ್ ಸಿಬ್ಬಂದಿ ಗುಣಮುಖ - Dakshina Kannada latest news
ಕೊರೊನಾ ಪಾಸಿಟಿವ್ ಬಂದಿದ್ದ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.
Vitla police station
ಮಹಾರಾಷ್ಟ್ರದ ರಾಯಗಡದಿಂದ ವಿಟ್ಲ ಪೊಲೀಸ್ ಠಾಣೆಗೆ ಭೇಟಿ ನೀಡಿದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢವಾಗುತ್ತಿದ್ದಂತೆ, ಠಾಣೆಯ 5 ಸಿಬ್ಬಂದಿ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ವರದಿಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿಗೆ ಕೊರೊನಾ ಇರುವುದು ದೃಢಪಟ್ಟ ತಕ್ಷಣವೇ ಸಿಬ್ಬಂದಿಯನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ಇದೀಗ ಮತ್ತೆ ಸಿಬ್ಬಂದಿ ಪರೀಕ್ಷೆ ನಡೆಸಿದ್ದು, ವರದಿಯಲ್ಲಿ ನೆಗೆಟಿವ್ ಬಂದ ಕಾರಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ, 14 ದಿನಗಳ ಕಾಲ ಮನೆಯಲ್ಲಿ ಕ್ವಾರಂಟೈನ್ ನಲ್ಲಿ ಇರಲು ಸೂಚಿಸಲಾಗಿದೆ.