ಮಂಗಳೂರು:ನಗರದಲ್ಲಿನ ಉಗ್ರ ಪರ ಗೋಡೆಬರಹ ಪ್ರಕರಣವನ್ನು ಎನ್ಐಎ ತನಿಖೆಗೆ ನೀಡಲು ಆದೇಶ ನೀಡಬೇಕು. ಜೊತೆಗೆ ಮಂಗಳೂರಿನಲ್ಲಿ ಶಾಶ್ವತವಾಗಿ ಎನ್ಐಎ ಕಚೇರಿಯನ್ನು ಸ್ಥಾಪಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಾಂತ ಸಂಚಾಲಕ ಸುನಿಲ್ ಕೆ.ಆರ್. ಆಗ್ರಹಿಸಿದ್ದಾರೆ.
ನಗರದ ಮಿನಿ ವಿಧಾನಸೌಧದ ಮುಂಭಾಗ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾವಿರಾರು ವರ್ಷಗಳಿಂದಲೂ ನಮ್ಮ ದೇಶ, ಸಂಸ್ಕೃತಿಯ ಮೇಲೆ ದಾಳಿ ನಡೆಸಿ ಸಂಪೂರ್ಣ ಇಸ್ಲಾಮೀಕರಣ ಮಾಡುವ ಷಡ್ಯಂತರ ನಡೆಸುತ್ತಲೇ ಬರಲಾಗುತ್ತಿದೆ. ಆ ಎಲ್ಲ ದಾಳಿಗಳನ್ನು ಎದುರಿಸುತ್ತಲೇ ಇದ್ದೇವೆ ಎಂದರು.