ಉಪ್ಪಿನಂಗಡಿ (ದಕ್ಷಿಣ ಕನ್ನಡ): ಅದೃಷ್ಟ ಗ್ರಾಹಕರಾಗಿ ಆಯ್ಕೆಯಾದ ಹಿನ್ನೆಲೆ 8,800 ರೂ. ಮುಖಬೆಲೆಯ ಮೊಬೈಲ್ ಫೋನ್ನನ್ನು, 1,785 ರೂ.ಗೆ ಕಳುಹಿಸಲಾಗುವುದು ಎಂಬ ಸಂದೇಶ ವ್ಯಕ್ತಿಯೊಬ್ಬರಿಗೆ ಬಂದಿದೆ. ಇದನ್ನು ನಂಬಿ ಅವರು ಅಂಚೆ ಮೂಲಕ ಬಂದ ಪಾರ್ಸೆಲ್ ಖರೀದಿಸಿದಾಗ, ಅದರಲ್ಲಿ ಫೋನ್ ಬದಲು ಕೆಟ್ಟು ಹೋದ ತಿಂಡಿಯ ಪೊಟ್ಟಣ ಇತ್ತು. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿಯ ದೇಗುಲವೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಭವಾನಿ ಶಂಕರ್ ಎಂಬುವರು ಇತ್ತೀಚೆಗೆ ಮೂರು ವಿವೋ ಕಂಪನಿಯ ಮೊಬೈಲ್ ಫೋನ್‌ಗಳನ್ನು ಖರೀದಿಸಿದ್ದರು. ಇದರ ಬಳಿಕ ಅವರ ಮೊಬೈಲ್‌ಗೆ ಕರೆಯೊಂದನ್ನು ಮಾಡಿದ ಸಂಸ್ಥೆಯ ಅಧಿಕಾರಿ ಎನ್ನಲಾದ ವ್ಯಕ್ತಿ ಮೂರು ಮೊಬೈಲ್ ಖರೀದಿಸಿದ್ದಕ್ಕೆ ಸಂಸ್ಥೆಯ ಲಕ್ಕಿ ಗ್ರಾಹಕರಾಗಿ ನೀವು ಆಯ್ಕೆಯಾಗಿದ್ದೀರಿ. ಈ ಹಿನ್ನೆಲೆ ನಿಮಗೆ 8,800 ರೂ. ಬೆಲೆಯ ಮೊಬೈಲ್ ಅನ್ನು ಕೇವಲ 1,785 ರೂ.ಗೆ ಕಳುಹಿಸಲಾಗುವುದು. ಹಣ ನೀಡಿ ಅಂಚೆ ಕಚೇರಿಯಿಂದ ಪಡೆದುಕೊಳ್ಳಿ ಎಂದು ತಿಳಿಸಿದ್ದರು.