ಮಂಗಳೂರು:ಕೇಂದ್ರ ಸರ್ಕಾರದ ಪೌರತ್ವ ಕಾಯ್ದೆ ವಿರುದ್ದದ.ಕ. ಮತ್ತುಉಡುಪಿ ಜಿಲ್ಲೆಯ ಮುಸ್ಲಿಂ ಸೆಂಟ್ರಲ್ ಕಮಿಟಿಯ ವತಿಯಿಂದ ಜ.15ರಂದು ಅಡ್ಯಾರ್ ಕಣ್ಣೂರು ರಾಷ್ಟ್ರೀಯ ಹೆದ್ದಾರಿಯ ಬಳಿಯಿರುವ ಶಹಾ ಗಾರ್ಡನ್ ಮೈದಾನದಲ್ಲಿ ಬೃಹತ್ ಸಮಾವೇಶವನ್ನು ನಡೆಸಲಾಗುತ್ತಿದ್ದು, ನಾವು ಭಾರತದಲ್ಲೇ ಹುಟ್ಟಿದವರು ಇಲ್ಲೇ ಸಾಯುತ್ತೇವೆ ಎಂದು ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಮಹಮ್ಮದ್ ಮಸೂದ್ ಹೇಳಿದರು.
ನಗರದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಅಸ್ಸೋಂನಲ್ಲಿ 15 ಲಕ್ಷ ಮಂದಿ ಹಿಂದೂಗಳಿಗೆ ಪೌರತ್ವ ನೀಡಲು ಎನ್ಆರ್ಸಿ ಕಾಯ್ದೆಯನ್ನು ಜಾರಿಗೆ ತರಲಾಯಿತು. ಆದರೆ ಸಿಎಎ ಕಾಯ್ದೆಯ ಪ್ರಕಾರ ಮುಸ್ಲಿಮರನ್ನು ಹೊರತುಪಡಿಸಿ ಉಳಿದ ಧರ್ಮಗಳಿಗೆ ಪೌರತ್ವ ನೀಡಲಾಗುತ್ತಿದೆ. ಇಲ್ಲಿನ ಮುಸ್ಲಿಮರಿಗೆ ಇದರಿಂದ ತೊಂದರೆಯಿಲ್ಲ ಎಂದು ಹೇಳಲಾಗುತ್ತಿದೆ. ಹಾಗಾದರೆ ಮುಸ್ಲಿಮರನ್ನು ಸಿಎಎ ಕಾಯ್ದೆಯಲ್ಲಿ ಯಾಕೆ ಹೊರಗಿರಿಸಲಾಗಿದೆ ಎಂದು ಪ್ರಶ್ನಿಸಿದರು.