ಮಂಗಳೂರು:ರಾಜ್ಯದಲ್ಲಿ ಪ್ರವಾಹದ ಪರಿಣಾಮ 25-30 ಸಾವಿರ ಕೋಟಿ ರೂ. ನಷ್ಟವಾಗಿದೆ. ಸುಮಾರು 19 ರಷ್ಟು ಜಿಲ್ಲೆಗಳು ಪ್ರವಾಹ ಪೀಡಿತವಾಗಿವೆ. ತಕ್ಷಣಕ್ಕೆ ತಾತ್ಕಾಲಿಕ ಪರಿಹಾರ 3 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಇಂದು ನಗರಕ್ಕೆ ಆಗಮಿಸಿದ ಅವರು, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇದಕ್ಕೂ ಮುನ್ನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದ.ಕ.ಜಿಲ್ಲೆಯಲ್ಲಿ ಮಂಗಳೂರು, ಬೆಳ್ತಂಗಡಿ, ಬಂಟ್ವಾಳ, ಮೂಡಬಿದ್ರೆ ಹಾಗೂ ಕಡಬದಲ್ಲಿ ಐದು ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, ಸೂಕ್ತ ನೆರೆ ಪರಿಹಾರ ನೀಲಾಗುವುದು ಎಂದರು.