ಕರ್ನಾಟಕ

karnataka

ETV Bharat / state

ಗಿರಿಗಿಟ್​ ವಿರುದ್ಧ ದೂರು ನೀಡಿದ್ದ ವಕೀಲರ ನಿಂದನೆ... ಪೊಲೀಸರಿಂದ ಕಿಡಿಗೇಡಿಗಳ ಬಂಧನ ಭರವಸೆ

ಗಿರಿಗಿಟ್ ಚಿತ್ರದ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದ ವಕೀಲರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಕಿಡಿಗೇಡಿಗಳು ಅವಾಚ್ಯ ಶಬ್ದಗಳಿಂದ ಕಮೆಂಟ್​ ಮಾಡಿದ್ದಾರೆ. ಅಂತವರ ವಿರುದ್ಧ ಕ್ರಮಕ್ಕೆ ಅಗ್ರಹಿಸಿ ವಕೀಲರು ಪೊಲೀಸ್​ ಇಲಾಖೆ ಮೊರೆ ಹೋಗಿದ್ದರು. ಇದಕ್ಕೆ ಪ್ರತಿಕ್ರಿಯಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

mangalore

By

Published : Sep 15, 2019, 11:22 PM IST

ಮಂಗಳೂರು:ಗಿರಿಗಿಟ್ ಚಿತ್ರದ ವಿರುದ್ಧ ನ್ಯಾಯಾಲಯ ಮೆಟ್ಟಿಲೇರಿದ ವಕೀಲರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ಅವಹೇಳನ ಮಾಡಿದ್ದ ದುಷ್ಕರ್ಮಿಗಳ ವಿರುದ್ಧ ಪೊಲೀಸ್ ಇಲಾಖೆ ಅಲರ್ಟ್​ ಆಗಿದ್ದು, ಆರೋಪಿಗಳನ್ನು ತಕ್ಷಣ ಬಂಧಿಸಲಾಗುವುದೆಂದು ಸಹಾಯಕ ಪೊಲೀಸ್ ಆಯುಕ್ತ ಭಾಸ್ಕರ್ ವಿ. ಬಿ. ​ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ವಕೀಲರ ಜೊತೆ ಚರ್ಚೆ ನಡೆಸಿದ ಪೊಲೀಸರು ಅವರು, ಈಗಾಗಲೇ ಫೇಸ್‌ಬುಕ್‌ನ ಮುಂಬೈ ಅಧಿಕಾರಿಗಳನ್ನು ಸಂಪರ್ಕಿಸಿ ಟ್ರೋಲ್ ಮರ್ಲೆರ್ ಮತ್ತು ಟ್ರೋಲ್ ನಂಜೆಲೆ ಎಂಬ ಎರಡು ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ. ಇನ್ನಷ್ಟು ಖಾತೆಗಳ ವಿವರವನ್ನು ಕೋರಲಾಗಿದೆ. ಕೆಲವು ಖಾತೆಗಳ ವಿವರ ಈಗಾಗಲೇ ಪೊಲೀಸ್ ಇಲಾಖೆಯ ಕೈ ಸೇರಿದ್ದು, ವೈಯಕ್ತಿಕವಾಗಿ ಕೆಲ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಆರೋಪಿಗಳ ಪರ ವಕಾಲತ್ತು ಇಲ್ಲ, ವಕೀಲರ ಸಂಘ ಸ್ಪಷ್ಟನೆ:

ವಕೀಲರ ವಿರುದ್ಧ ಅವಹೇಳನಕಾರಿ ಕಮೆಂಟ್ ಹಾಕಿರುವ ಕಿಡಿಗೇಡಿಗಳ ವಿರುದ್ಧ ಮಂಗಳೂರು ವಕೀಲರ ಸಂಘದ ಯಾವ ಸದಸ್ಯರೂ ನ್ಯಾಯಾಲಯದಲ್ಲಿ ಪ್ರತಿನಿಧಿಸುವುದಿಲ್ಲ ಎಂದು ಮಂಗಳೂರು ವಕೀಲರ ಸಂಘ ಸ್ಪಷ್ಟಪಡಿಸಿದೆ. ಅಲ್ಲದೆ ಜಿಲ್ಲೆಯ ಹಾಗೂ ಪಕ್ಕದ ಜಿಲ್ಲೆಯ ಇತರ ವಕೀಲರ ಸಂಘಕ್ಕೂ ಆರೋಪಿಗಳ ಪರ ವಕಾಲತ್ತು ಹಾಕದಂತೆ ಮನವಿ ಮಾಡಲಾಗುವುದು ಎಂದು ಸಂಘ ತಿಳಿಸಿದೆ.

ಗಿರಿಗಿಟ್ ಚಿತ್ರದ ವಿರುದ್ಧ ಮಂಗಳೂರಿನ ವಕೀಲರನ್ನು ಪ್ರತಿನಿಧಿಸಿ ಮಂಗಳೂರು ವಕೀಲರ ಸಂಘ ನ್ಯಾಯಾಲಯ ಮೆಟ್ಟಿಲೇರಿತ್ತು. ಈ ಮಧ್ಯೆ ಗಿರಿಗಿಟ್ ಚಿತ್ರ ತಂಡ ಹಾಗೂ ಚಿತ್ರತಂಡದ ಪ್ರಮುಖರು ಗಣ್ಯರು ವಕೀಲರ ಸಂಘವನ್ನು ಸಂಪರ್ಕಿಸಿ ಆಗಿರುವ ಗೊಂದಲವನ್ನು ಸರಿಪಡಿಸುವ ಭರವಸೆ ನೀಡಿ ವಿವಾದವನ್ನು ಸುಖಾಂತ್ಯಗೊಳಿಸುವಂತೆ ಮನವಿ ಮಾಡಿದ್ದರು. ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದು ಹಾಕಲು ತಂಡ ಒಪ್ಪಿದ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ಚಿತ್ರ ಪ್ರದರ್ಶನ ಮುಂದುವರಿಸುವಂತೆ ಮನವಿ ಮಾಡಲಾಗಿತ್ತು. ಎಲ್ಲವೂ ಸೌಹಾರ್ದವಾಗಿ ಮುಕ್ತಾಯ ಕಾಣುತ್ತಿರುವ ಹಂತದಲ್ಲಿ ಸಾಮಾಜಿಕ ತಾಣದಲ್ಲಿ ಕೆಲವು ಕಿಡಿಗೇಡಿಗಳು ಕೆಲ ವಕೀಲರನ್ನು ವೈಯಕ್ತಿಕವಾಗಿ ನಿಂದಿಸಿರುವ ಪ್ರಕರಣಗಳು ಕಂಡು ಬಂದಿದ್ದವು.

ಈ ಹಿನ್ನೆಲೆಯಲ್ಲಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ವಿ. ರಾಘವೇಂದ್ರ ಮತ್ತು ಶುಕರಾಜ್ ಕೊಟ್ಟಾರಿ ವೈಯಕ್ತಿಕವಾಗಿ ಎರಡು ಪ್ರತ್ಯೇಕ ದೂರುಗಳನ್ನು ನೀಡಿದ್ದರು. ದೂರಿನ ಜೊತೆಗೆ ಚಾರಿತ್ರ್ಯ ವಧೆ ಮಾಡಿರುವ ಮತ್ತು ಅವಹೇಳಕಾರಿ ಸಂದೇಶಗಳನ್ನು ಪೊಲೀಸ್ ಅಧಿಕಾರಿಗಳಿಗೆ ನೀಡಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಅಧಿಕಾರಿಗಳು ಭರವಸೆ ನೀಡಿದ್ದಾರೆ.

ABOUT THE AUTHOR

...view details