ಕರ್ನಾಟಕ

karnataka

ETV Bharat / state

ಮಂಗಳೂರು: 35 ಮಹಿಳಾ ಪೊಲೀಸ್ ಸಿಬ್ಬಂದಿಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ - Mangaluru

ಗರ್ಭಿಣಿಯರು ಅಥವಾ ಎರಡು ವರ್ಷದೊಳಗಿನ ಮಕ್ಕಳಿರುವ ಮಹಿಳಾ ಪೊಲೀಸ್ ಸಿಬ್ಬಂದಿಗೆ ಕಂಪ್ಯೂಟರ್ ಅಥವಾ ಲ್ಯಾಪ್ ಟಾಪ್ ಮೂಲಕ‌ ಕರ್ತವ್ಯ ನಿರ್ವಹಿಸುವಂತೆ ಅವಕಾಶ ನೀಡಲಾಗಿದೆ.

Mangaluru
ಮಂಗಳೂರು

By

Published : Apr 18, 2021, 1:58 PM IST

ಮಂಗಳೂರು: ಕೊರೊನಾ ಮುಂಜಾಗ್ರತಾ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 35 ಮಹಿಳಾ ಪೊಲೀಸ್ ಸಿಬ್ಬಂದಿಗೆ ಏ.30ರವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ.

ಗರ್ಭಿಣಿ ಮಹಿಳೆಯರು ಹಾಗೂ ಎರಡು ವರ್ಷದೊಳಗಿನ ಮಕ್ಕಳಿರುವ ತಾಯಂದಿರಿಗೆ ಮನೆಯಿಂದಲೇ ಕಂಪ್ಯೂಟರ್ ಅಥವಾ ಲ್ಯಾಪ್ ಟಾಪ್ ಮೂಲಕ‌ ಕರ್ತವ್ಯ ನಿರ್ವಹಿಸುವಂತೆ ಅವಕಾಶ ಕಲ್ಪಿಸಲಾಗಿದೆ.

ಒಂದನೇ ಕೋವಿಡ್ ಅಲೆಯ ಸಂದರ್ಭದಲ್ಲಿ 300 ಕ್ಕೂ ಅಧಿಕ ‌ಮಂದಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಈ ಅವಕಾಶ ನೀಡಲಾಗಿದೆ ಎಂದು ಮಂಗಳೂರು ಉಪ ಪೊಲೀಸ್ ಆಯುಕ್ತ ಹರಿರಾಂ ಶಂಕರ್ ತಿಳಿಸಿದ್ದಾರೆ.

ABOUT THE AUTHOR

...view details