ಮಂಗಳೂರು: ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರಿ ಇಲಾಖೆಗಳಿಗೆ ಅದರದ್ದೇ ಆದ ಜವಾಬ್ದಾರಿಗಳಿರುತ್ತದೆ. ಅದರಂತೆ ಮಂಗಳೂರಿನಲ್ಲಿ ಮಹಾನಗರ ಪಾಲಿಕೆ ಕೂಡ ಹಲವು ಕ್ರಮಗಳ ಮೂಲಕ ಸೋಂಕು ನಿಯಂತ್ರಣಕ್ಕಾಗಿ ಶ್ರಮಿಸುತ್ತಿದೆ.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಪಾಲಿಕೆಯಿಂದ ಮೂಲಸೌಕರ್ಯ ಮತ್ತು ಮಾನವ ಶಕ್ತಿಯ ಸದ್ಭಳಕೆಯಾಗುತ್ತಿದೆ.
ಈಗಾಗಲೇ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆಸ್ಪತ್ರೆಗಳ ಮೇಲಿನ ಹೊರೆ ತಗ್ಗಿಸಲು ಕೋವಿಡ್ ಕೇರ್ ಸೆಂಟರ್ಗಳನ್ನು ತೆರೆಯಲಾಗಿದೆ. ಮಂಗಳೂರಿನ ಇಎಸ್ಐ, ಎನ್ಐಟಿಕೆಗಳಲ್ಲಿ ಕೋವಿಡ್ ಕೇರ್ ಸೆಂಟರ್ಗಳನ್ನು ಆರಂಭಿಸಲಾಗಿದೆ. ಕೊರೊನಾ ಸೋಂಕಿತರ ಮನೆಯನ್ನು ಗುರುತಿಸಿ ಅಲ್ಲಿ ಸ್ಟಿಕ್ಕರ್ ಹಾಕುವ ಕಾರ್ಯವನ್ನು ಮಾಡಲಾಗುತ್ತಿದೆ. ಇದರಿಂದಾಗಿ ಕೊರೊನಾ ಸೋಂಕಿತರ ಬಗ್ಗೆ ಮಾಹಿತಿಗಳನ್ನು ಸ್ಥಳೀಯರಿಗೆ ನೀಡಿ ಜಾಗೃತಿ ವಹಿಸುವಂತೆ ಮಾಡುವ ಜತೆಗೆ ಕೊರೊನಾ ಸೋಂಕಿತರು ಮನೆಯಿಂದ ಹೊರ ಹೋಗದಂತೆ ಎಚ್ಚರ ವಹಿಸಲು ಸಾಧ್ಯವಾಗುತ್ತದೆ.