ಮಂಗಳೂರು:ಹತ್ತು ವರ್ಷಗಳಿಂದ ಸಂಸದರಾಗಿದ್ದ ನಳಿನ್ ಕುಮಾರ್ ಜಿಲ್ಲೆಗೆ ಮಾಡಿದ ಅಭಿವೃದ್ಧಿ ಕಾರ್ಯಗಳಾದರೂ ಏನು? ಸಂಸತ್ತಿನಲ್ಲಿ ಎಷ್ಟು ಬಾರಿ ಧ್ವನಿ ಎತ್ತಿದ್ದಾರೆ, ಆ ಧ್ವನಿಗೆ ಸಿಕ್ಕ ಫಲವಾದ್ರೂ ಏನು ? ದ.ಕ. ಜಿಲ್ಲೆಗೆ ಅವರ ಕೊಡುಗೆ ಏನು ಎಂದು ಸಚಿವ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
ನಗರದ ಮಲ್ಲಿಕಟ್ಟೆಯಲ್ಲಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ವಿಜಯ ಬ್ಯಾಂಕ್ ವಿಲೀನದ ಬಗ್ಗೆ ಶೋಭಾ ಕರಂದ್ಲಾಜೆ, ಸದಾನಂದಗೌಡ ಹಾಗೂ ನಳಿನ್ ಕುಮಾರ್ ಕಟೀಲು ಸಂಸತ್ತಿನಲ್ಲಿ ಧ್ವನಿ ಎತ್ತಿಲ್ಲ. ಎತ್ತಿದ್ದರೆ ನಮ್ಮ ಸ್ವಾಭಿಮಾನದ ಸಂಕೇತವಾಗಿದ್ದ ವಿಜಯ ಬ್ಯಾಂಕ್ ಕೈ ಬಿಟ್ಟು ಹೋಗುತ್ತಿರಲಿಲ್ಲ. ಆ ಧ್ವನಿಯೇ ಇಲ್ಲ ಅಂದ ಮೇಲೆ ಇನ್ನು ಸಂಸತ್ ಸದಸ್ಯ, ಮಂತ್ರಿ ಸ್ಥಾನ ಉಳಿಸಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ರು.