ಮಂಗಳೂರು: ನಗರದಲ್ಲಿ ನ.5ರಂದು ಎರಡು ದಶಕಗಳ ಬಳಿಕ ಬಿಜೆಪಿ ಕಾರ್ಯಕಾರಿಣಿ ಸಭೆ ಹಾಗೂ ಕೋರ್ ಕಮಿಟಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸಭೆ ನಡೆಯುವ ರಮಣ ಪೈ ಸಭಾಂಗಣದಲ್ಲಿ ವ್ಯಾಪಕ ಸಿದ್ಧತೆ ನಡೆಯುತ್ತಿದೆ.
ಮಂಗಳೂರು ಬಿಜೆಪಿ ಕಾರ್ಯಕಾರಿಣಿ ಸಭೆಗೆ ವ್ಯಾಪಕ ಸಿದ್ಧತೆ - preparation for Mangalore BJP executive meeting
ಮಂಗಳೂರಿನಲ್ಲಿ ನ.5ರಂದು ಎರಡು ದಶಕಗಳ ಬಳಿಕ ಬಿಜೆಪಿ ಕಾರ್ಯಕಾರಿಣಿ ಸಭೆ ಹಾಗೂ ಕೋರ್ ಕಮಿಟಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸಭೆ ನಡೆಯುವ ರಮಣ ಪೈ ಸಭಾಂಗಣದಲ್ಲಿ ವ್ಯಾಪಕ ಸಿದ್ಧತೆ ನಡೆಯುತ್ತಿದೆ.
ಬಿಜೆಪಿ ಕಾರ್ಯಕಾರಿಣಿ ಸಭೆ
ಸಭೆಯು ಅಂದು ಬೆಳಗ್ಗೆ 10 ಗಂಟೆಗೆ ಆರಂಭಗೊಳ್ಳಲಿದ್ದು, ಸಿಎಂ ಬಿಎಸ್ವೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪ್ರಮುಖ ಸಚಿವರು ಸೇರಿ 120 ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಭಾಂಗಣವನ್ನು ಪೂರ್ತಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕುರ್ಚಿಗಳ ನಡುವೆ ಅಂತರವನ್ನು ಇಡಲಾಗುತ್ತಿದೆ.