ಸುಬ್ರಹ್ಮಣ್ಯ (ದಕ್ಷಿಣ ಕನ್ನಡ):ಒಂಟಿ ಸಲಗವೊಂದು ರಸ್ತೆಗೆ ಬಂದು ವಾಹನ ಸವಾರರನ್ನು ಅಟ್ಟಾಡಿಸಿದ ಘಟನೆ ಭಾನುವಾರ ಸಂಜೆಕುಕ್ಕೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ. ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದ ಅನಿಲ ಎಂಬಲ್ಲಿ ರಾಜ್ಯ ಹೆದ್ದಾರಿಗೆ ಆಗಮಿಸಿದ ಕಾಡಾನೆ ಕಾರು, ದ್ವಿಚಕ್ರ ವಾಹನ ಸವಾರರನ್ನು ಓಡಿಸಿದೆ.
ಭಾನುವಾರ ಬೆಳಗ್ಗೆಯಿಂದಲೇ ಈ ಪ್ರದೇಶದಲ್ಲಿ ಬೀಡುಬಿಟ್ಟಿದ್ದ ಒಂಟಿ ಸಲಗ, ಸಂಜೆ ಹೊತ್ತು ವಾಹನ ಸವಾರರಿಗೆ ತೊಂದರೆ ಕೊಟ್ಟಿದೆ.