ದಕ್ಷಿಣ ಕನ್ನಡ:ಕಡಬದ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದ ಯುವತಿಯೊಬ್ಬಳು ಮಂಗಳವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಕಡಬ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಸಾವು - ಕಡಬ ಪೊಲೀಸ್ ಠಾಣೆ
ಕಡಬದ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದ ಯುವತಿಯೊಬ್ಬಳು ಮಂಗಳವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು,ಚಿಕಿತ್ಸೆ ಫಲಕಾರಿಯಾಗದೆ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಸಾವು
ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಹರಿಮಜಲು ನಿವಾಸಿ ಸವಿತ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಮಂಗಳವಾರ ವಿಷ ಸೇವಿಸಿದ್ದಳು. ನಂತರ ಈಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ,ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಇನ್ನು, ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.