ಕಡಬ (ದ.ಕ):108 ಆ್ಯಂಬುಲೆನ್ಸ್ನಲ್ಲಿ ಗರ್ಭಿಣಿವೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಆ್ಯಂಬುಲೆನ್ಸ್ನಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ: ಸುರಕ್ಷಿತ ಹೆರಿಗೆ ಮಾಡಿಸಿದ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ - 108 ಅಂಬ್ಯುಲೆನ್ಸ್ನಲ್ಲಿ ಹೆರಿಗೆ
108 ಆ್ಯಂಬುಲೆನ್ಸ್ನಲ್ಲಿ ತೆರಳುತ್ತಿದ್ದಾಗ ಮಹಿಳೆವೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆ್ಯಂಬುಲೆನ್ಸ್ ಸಿಬ್ಬಂದಿ ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ಆ್ಯಂಬುಲೆನ್ಸ್ ಸಿಬ್ಬಂದಿ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
![ಆ್ಯಂಬುಲೆನ್ಸ್ನಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ: ಸುರಕ್ಷಿತ ಹೆರಿಗೆ ಮಾಡಿಸಿದ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ woman-gives-birth-to-baby-in-ambulance](https://etvbharatimages.akamaized.net/etvbharat/prod-images/768-512-9825877-thumbnail-3x2-med.jpg)
ಸುಳ್ಯ ತಾಲೂಕಿನ ಎಡಮಂಗಲ ಡೆಕ್ಕಳ ನಿವಾಸಿ ಹರಿಪ್ರಸಾದ್ ಎಂಬುವರ ಪತ್ನಿ ಮೊದಲ ಹೆರಿಗೆಗಾಗಿ ಕಡಬದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದರು. ತಪಾಸಣೆ ನಡೆಸಿದ ಇಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಅಥವಾ ಸುಳ್ಯಕ್ಕೆ ಕರೆದೊಯ್ಯಲು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಡಬದ 108 ಆ್ಯಂಬುಲೆನ್ಸ್ನಲ್ಲಿ ತೆರಳುತ್ತಿದ್ದಾಗ ಸುಳ್ಯ ಸಮೀಪದ ಐವರ್ನಾಡು ಸಮೀಪಿಸುತ್ತಿದ್ದಂತೆ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆ್ಯಂಬುಲೆನ್ಸ್ ಸಿಬ್ಬಂದಿ ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ.
ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆಂದು ತಿಳಿದುಬಂದಿದೆ. ಆ್ಯಂಬುಲೆನ್ಸ್ ಸಿಬ್ಬಂದಿ ಪ್ರಜ್ಞಾ ಹಾಗೂ ರಾಜೇಶ್ ಅವರ ಈ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.