ಪತಿಯ ಅಂತ್ಯಸಂಸ್ಕಾರ ನಡೆಸಲು ಅಸಹಾಯಕಳಾದ ಪತ್ನಿ: ಮಹಿಳೆಯ ಕಷ್ಟಕ್ಕೆ ಸ್ಪಂದಿಸಿದ ಮಣಿವಣ್ಣನ್ - captain manivannan helps a orphan women
ನಿರ್ಗತಿಕ ಮಹಿಳೆಯೊಬ್ಬರು ಮೃತಪಟ್ಟ ಪತಿಯ ಅಂತ್ಯಸಂಸ್ಕಾರ ಮಾಡಲು ಯಾರೂ ಇಲ್ಲದೇ ಅಸಹಾಯಕಳಾಗಿರುವ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಈ ವಿಷಯ ತಿಳಿದ ಸರ್ಕಾರದ ಕಾರ್ಯದರ್ಶಿ ಕ್ಯಾ.ಮಣಿವಣ್ಣನ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮಹಿಳೆಯ ಸಹಾಯಕ್ಕೆ ಧಾವಿಸುವಂತೆ ಸೂಚನೆ ನೀಡಿ ಮಾನವೀಯತೆ ಮೆರೆದಿದ್ದಾರೆ.
ಡಿಸಿಗೆ ಸರ್ಕಾರ ಸೂಚನೆ
ಮಂಗಳೂರು:ಪತಿಯ ಅಂತ್ಯಸಂಸ್ಕಾರ ನಡೆಸಲು ಅಸಹಾಯಕಳಾದ ಮಹಿಳೆಗೆ ನೆರವು ನೀಡುವಂತೆ ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಪಿ. ಅವರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಲಭ್ಯವಾದ ಕೂಡಲೇ ಸರ್ಕಾರದ ಕಾರ್ಯದರ್ಶಿ ಈ ವಿಷಯದ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ವಹಿಸುವಂತೆ ದ.ಕ.ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
TAGGED:
manglore latest news updates