ಬಂಟ್ವಾಳ(ದಕ್ಷಿಣ ಕನ್ನಡ):ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಕೊಡಾಜೆ ಗಣೇಶ್ ನಗರದಲ್ಲಿ ಹಾಡಹಗಲೇ ಮಹಿಳೆಯೊಬ್ಬರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ಸೋಮವಾರ ನಡೆದಿದೆ. ಶಕುಂತಳಾ ಮೃತ ಮಹಿಳೆಯಾಗಿದ್ದು, ಆರೋಪಿ ಶ್ರೀಧರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಶಕುಂತಳಾ ಸುಮಾರು 5 ವರ್ಷಗಳಿಂದ ಪುತ್ತೂರಿನ ಕೊಂಬೆಟ್ಟುವಿನಲ್ಲಿ ಕ್ಯಾಂಟೀನ್ ನಡೆಸುತ್ತಿದ್ದರು. ಕಳೆದ ಒಂದು ವರ್ಷದಿಂದ ಸ್ಕೂಟರ್ನಲ್ಲಿ ಪುತ್ತೂರಿಗೆ ಹೋಗಿ ಬರುತ್ತಿದ್ದರು. ಕೆಲ ತಿಂಗಳುಗಳ ಹಿಂದೆ ಯಮನಾಜೆ ಎಂಬಲ್ಲಿನ ನಿವಾಸಿ ಶ್ರೀಧರ್ ಮಹಿಳೆಯ ಮನೆ ಬಳಿ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದನಂತೆ. ಬಳಿಕ ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಇದೇ ಕಾರಣಕ್ಕೆ ಶ್ರೀಧರ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.