ಮಂಗಳೂರು:ಹಲವು ಪ್ರಕರಣಗಳ ಆರೋಪಿಯಾಗಿ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ತಲೆಮರೆಸಿಕೊಂಡಿದ್ದ ಹಲವು ಪ್ರಕರಣಗಳ ಆರೋಪಿ ಮಹಿಳೆಯ ಬಂಧನ - ಹಲವು ಪ್ರಕರಣಗಳ ಆರೋಪಿತೆಯ ಬಂಧನ
ಶಿವಮೊಗ್ಗ ಜಿಲ್ಲೆಯ ಮತ್ತೂರು ಗ್ರಾಮದ ಮಡಿಕೆಕಟ್ಟೆ ನಿವಾಸಿ ನೇತ್ರಾವತಿ ಹಲವು ಪ್ರಕರಣಗಳ ಆರೋಪಿಯಾಗಿ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದಳು. ಇದೀಗ, ಆಕೆಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಮತ್ತೂರು ಗ್ರಾಮದ ಮಡಿಕೆಕಟ್ಟೆ ನಿವಾಸಿ ನೇತ್ರಾವತಿ(37) ಬಂಧಿತ ಮಹಿಳೆ. ಈಕೆಯ ಮೇಲೆ ದ.ಕ. ಜಿಲ್ಲೆಯ ಉಪ್ಪಿನಂಗಡಿ, ಬಂಟ್ವಾಳ, ಬೆಳ್ತಂಗಡಿ, ಪೂಂಜಾಲಕಟ್ಟೆ, ಸುಳ್ಯ ಹಾಗೂ ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಒಟ್ಟು ಏಳು ಪ್ರಕರಣಗಳು ದಾಖಲಾಗಿದ್ದು, ಈವರೆಗೂ ತಲೆಮರೆಸಿಕೊಂಡಿದ್ದಳು.
ಈಕೆಗೆ ಜಾಮೀನುದಾರನಾಗಿರುವ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ದೇವೇಗೌಡನ ಹಟ್ಟಿಯ ರಾಜೇ ಸಾಹೇಬ್ ನದಾಫ್ ಎಂಬಾತನನ್ನು ಈ ಹಿಂದೆಯೇ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕರಗಡ ಗ್ರಾಮದಲ್ಲಿ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸದ್ಯ ಮಹಿಳೆ ಕೂಡಾ ಸಿಕ್ಕಿಬಿದ್ದಿದ್ದು, ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.