ಮಂಗಳೂರು:ಕಳೆದೆರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿವಾಹಿತ ಮಹಿಳೆಯ ಮೃತದೇಹ ಕೊಲ್ಲಬೆಟ್ಟುವಿನ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ.
ನಾಪತ್ತೆಯಾಗಿದ್ದ ಮಹಿಳೆ ಬಾವಿಯಲ್ಲಿ ಶವವಾಗಿ ಪತ್ತೆ! - Mangalore crime latest news
ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಇಂದು ಬಾವಿಯೊಂದರಲ್ಲಿ ಪತ್ತೆಯಾಗಿದೆ.

Mangalore
ನಗರದ ಬಡಗುಳಿಪಾಡಿ ಗ್ರಾಮದ ಕೊಲ್ಲಬೆಟ್ಟು ನಿವಾಸಿ ಆಶಾಲತಾ (36) ಮೃತಪಟ್ಟವರು. ಜು. 26ರಂದು ರಾತ್ರಿ ಆಶಾಲತಾ ಊಟ ಮಾಡಿ ಮಲಗಿದ್ದರು. ಮರುದಿನ ಬೆಳಗ್ಗೆ ಮನೆಯಿಂದ ನಾಪತ್ತೆಯಾಗಿದ್ದರು. ಈ ಕುರಿತಂತೆ ಗಾಬರಿಗೊಂಡ ಮನೆಯವರು, ನೆರೆಹೊರೆಯವರು ಹಾಗೂ ಸಂಬಂಧಿಕರಲ್ಲಿ ವಿಚಾರಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಮಹಿಳೆಯ ಪತಿ ಬಜ್ಪೆ ಠಾಣೆಗೆ ದೂರು ನೀಡಿದ್ದರು.
ಆದರೆ ಇಂದು ಮಹಿಳೆ ಕೊಲ್ಲಬೆಟ್ಟುವಿನ ಮನೆಯ ಸಮೀಪದ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಬಜ್ಪೆ ಪೊಲೀಸರು ತಿಳಿಸಿದ್ದಾರೆ.