ಕರ್ನಾಟಕ

karnataka

ETV Bharat / state

ಕೊರೊನಾಗೆ ಮಂಗಳೂರಿನಲ್ಲಿ ಮತ್ತೊಂದು ಬಲಿ: ಸಾವಿನ ಸಂಖ್ಯೆ 10ಕ್ಕೆ ಏರಿಕೆ - Mangalore corona latest news

ದಕ್ಷಿಣ ಕನ್ನಡದಲ್ಲಿ ಇಂದು ಕೊರೊನಾಗೆ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

Mangalore
Mangalore

By

Published : Jun 24, 2020, 3:55 PM IST

ಮಂಗಳೂರು: ಜಿಲ್ಲೆಯಲ್ಲಿ ಇಂದು ಕೊರೊನಾದಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಉಳ್ಳಾಲದ ಅಜಾದ್ ನಗರದ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದು, ಇವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರ ಗಂಟಲು ದ್ರವದ ಪರೀಕ್ಷೆಯಲ್ಲಿ ಕೊರೊನಾ ಇರುವುದು ನಿನ್ನೆ ದೃಢಪಟ್ಟಿತ್ತು. ಇಂದು ಮೃತಪಟ್ಟಿದ್ದಾರೆ.

ಇವರು ಹತ್ತು ದಿನಗಳ ಹಿಂದೆ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗುತ್ತಿದೆ.

ಜಿಲ್ಲೆಯಲ್ಲಿ ಮಹಾಮಾರಿಗೆ ನಿನ್ನೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇಂದು ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಈ ಮೂಲಕ ದ.ಕ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ABOUT THE AUTHOR

...view details