ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಪುತ್ತೂರು ಇವುಗಳ ಆಶ್ರಯದಲ್ಲಿ ವಿಶ್ವ ಪರಿಸರ ದಿನವನ್ನ ಸೋಮವಾರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು.
ಪುತ್ತೂರು ತಾ.ಪಂನಿಂದ ವಿಶ್ವ ಪರಿಸರ ದಿನಾಚರಣೆ - Taluk Panchayat Puttur
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಪುತ್ತೂರು ಇವುಗಳ ಆಶ್ರಯದಲ್ಲಿ ವಿಶ್ವ ಪರಿಸರ ದಿನವನ್ನ ಆಚರಿಸಿದ್ದು, ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿ ಉಚಿತ ಸಸಿ ವಿತರಣೆಗೆ ಚಾಲನೆ ನೀಡಿದರು.
ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿ ಉಚಿತ ಸಸಿ ವಿತರಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ವತಿಯಿಂದ ಸುಮಾರು 100ಕ್ಕೂ ಮಿಕ್ಕಿದ ವಿವಿಧ ಜಾತಿಯ ಗಿಡಗಳನ್ನು ಸಾರ್ವಜನಿಕರಿಗೆ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾ.ಪಂ ಅಧ್ಯಕ್ಷ ಕೆ. ರಾಧಾಕೃಷ್ಣ ಬೋರ್ಕರ್, ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಸದಸ್ಯೆ ಮೀನಾಕ್ಷಿ ಮಂಜುನಾಥ್, ಕಾರ್ಯ ನಿರ್ವಹಣಾಧಿಕಾರಿ ನವೀನ್ ಭಂಡಾರಿ, ತಾಪಂ ವಿಷಯ ನಿರ್ವಾಹಕ ಶಿವಪ್ರಕಾಶ್ ಅಡ್ಪಂಗಾಯ ಇದ್ದರು.