ಮಂಗಳೂರು: ಮಾನವನು ಪ್ರಕೃತಿಯ ಸಂಪತ್ತನ್ನು ಮುಂದಿನ ಪೀಳಿಗೆಗೆ ಉಳಿಸುವ ಕೆಲಸ ಮಾಡಬೇಕು. ಅದನ್ನು ಸಮರ್ಥವಾಗಿ ನಾವು ನಿರ್ವಹಿಸಬೇಕಾದರೆ ಮೊದಲಾಗಿ ನಾವು ಜನಸಂಖ್ಯೆಯನ್ನು ನಿಯಂತ್ರಣದಲ್ಲಿಡಬೇಕು ಎಂದು ದ.ಕ.ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣಿ ಆರ್. ಅಭಿಪ್ರಾಯಪಟ್ಟರು.
ಪ್ರಕೃತಿ ಸಂಪನ್ಮೂಲ ಮುಂದಿನ ಪೀಳಿಗೆಗೆ ಉಳಿಯಬೇಕಾದರೆ ಜನಸಂಖ್ಯಾ ನಿಯಂತ್ರಣ ಅಗತ್ಯ - undefined
ದ.ಕ. ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಂಗಳೂರು ವಿವಿ ರಾಷ್ಟ್ರೀಯ ಸೇವಾಯೋಜನೆಯ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆ ಆಚರಿಸಲಾಗಿದೆ.
ದ.ಕ. ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಮಂಗಳೂರು ವಿವಿ ರಾಷ್ಟ್ರೀಯ ಸೇವಾಯೋಜನೆಯ ವತಿಯಿಂದ ಮಂಗಳೂರು ವಿವಿಯಲ್ಲಿ ಗುರುವಾರ ಬೆಳಗ್ಗೆ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲಾ ಕಡೆಗಳಲ್ಲೂ ಜನಸಂಖ್ಯಾ ಪ್ರಮಾಣ ಹೆಚ್ಚಾಗುತ್ತಿದೆ. ಆದರೆ, ಮರಣ ಹೊಂದುವವರ ಸಂಖ್ಯೆ ವಿರಳವಾಗುತ್ತಿದೆ. ಇದು ಉತ್ತಮ ಬೆಳವಣಿಗೆ. ಯಾಕೆಂದರೆ ಈಗ ಆರೋಗ್ಯ ಸೇವೆ ಎಲ್ಲರಿಗೂ ಸುಲಭವಾಗಿ ದೊರೆಯುತ್ತಿದೆ. ಆದರೆ, ಜನಸಂಖ್ಯೆಯನ್ನು ಯಾವ ರೀತಿಯಲ್ಲಿ ನಿಯಂತ್ರಿಸಬಹುದು ಎಂಬುದರ ಬಗ್ಗೆ ಇನ್ನೂ ನಾವು ವಿಚಾರ ಮಾಡಿಲ್ಲ. ನಾವು ಜನಸಂಖ್ಯೆಯನ್ನು ನಿಯಂತ್ರಣದಲ್ಲಿಟ್ಟರೆ ಮಾತ್ರ ಎಲ್ಲರಿಗೂ ಸಂಪತ್ತಿನ ಬಳಕೆ ಮಾಡಲು ಸಾಧ್ಯ ಎಂದರು.
ಈ ಸಂದರ್ಭ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ ರಾವ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಸಿಕಂದರ್ ಪಾಷಾ, ಮಂಗಳೂರು ವಿವಿ ಕಾಲೇಜು ಪ್ರಾಂಶುಪಾಲ ಡಾ.ಉದಯ ಕುಮಾರ್ ಎಂ.ಎ., ಉಪಾನ್ಯಾಸಕ ಡಾ.ಯೋಗೀಶ್ ಕೈರೋಡಿ ಉಪಸ್ಥಿತರಿದ್ದರು.