ಮಂಗಳೂರು(ದಕ್ಷಿಣ ಕನ್ನಡ): ಯಕ್ಷಗಾನ ನಡೆಯುತ್ತಿದ್ದ ಸಂದರ್ಭದಲ್ಲಿ ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಮೇಳದ ಕಲಾವಿದರೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಮೃತ ಪಟ್ಟವರು. ಕಟೀಲಿನ ಕ್ಷೇತ್ರದ ಸರಸ್ವತೀ ಸದನದಲ್ಲಿ ನಿನ್ನೆ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು. ಈ ಸಂದರ್ಭ ಶಿಶುಪಾಲನ ಪಾತ್ರಧಾರಿಯಾಗಿದ್ದ ಗುರುವಪ್ಪ ಬಾಯರು ರಂಗಸ್ಥಳದಲ್ಲೇ ಇದ್ದ ವೇಳೆ ಹೃದಯಾಘಾತವಾಗಿದೆ.