ಮಂಗಳೂರು:ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಯೋಗ ದಿನಾಚರಣೆ ಆಚರಿಸಲಾಯಿತು.
ಧರ್ಮಸ್ಥಳದಲ್ಲಿ ಯೋಗ ದಿನಾಚರಣೆ - Kannada news
ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ನಡೆದ ಯೋಗ ಪ್ರದರ್ಶನದಲ್ಲಿ ಯೋಗ ಶಿಬಿರಾರ್ಥಿಗಳು ಯೋಗಾಸನದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು.
ಧರ್ಮಸ್ಥಳದಲ್ಲಿ ಯೋಗ ದಿನಾಚರಣೆ
ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ಒಂದು ಸಾವಿರ ಶಿಬಿರಾರ್ಥಿಗಳಿಂದ ಸಾಮೂಹಿಕ ಯೋಗ ಪ್ರಾತ್ಯಕ್ಷಿಕೆ ಮೂಲಕ ವಿಶ್ವ ಯೋಗ ದಿನಾಚರಣೆ ನಡೆಯಿತು. ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ನಡೆದ ಯೋಗ ಪ್ರದರ್ಶನದಲ್ಲಿ ಯೋಗ ಶಿಬಿರಾರ್ಥಿಗಳು ಯೋಗಾಸನದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು, ಶಾಸಕ ಹರೀಶ್ ಪೂಂಜಾ ಉಪಸ್ಥಿತರಿದ್ದರು.