ಕರ್ನಾಟಕ

karnataka

ETV Bharat / state

ಸುಳ್ಯದ ವಸತಿಗೃಹದಲ್ಲಿ ನೇಣಿಗೆ ಶರಣಾದ ಯುವಕ-ಯುವತಿ! - Young woman commit suicide

ಸುಳ್ಯದಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ನಗರದ ವಸತಿಗೃಹವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕ ಹಾಗೂ ಯುವತಿಯ ಮೃತದೇಹಗಳು ಪತ್ತೆಯಾಗಿದ್ದು ಘಟನೆಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ.

Young man and woman commit suicide in Sullia
ಯುವಕ ಹಾಗೂ ಯುವತಿ

By

Published : Oct 19, 2020, 6:48 PM IST

Updated : Oct 19, 2020, 6:59 PM IST

ಸುಳ್ಯ:ನಗರದ ವಸತಿಗೃಹವೊಂದರಲ್ಲಿ ಯುವಕ ಹಾಗೂ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಐವರ್ನಾಡಿನ ಕಟ್ಟತ್ತಾರು ತಿಮ್ಮಪ್ಪ ಗೌಡರ ಪುತ್ರ ದರ್ಶನ್ ಎಂದು ತಿಳಿದು ಬಂದಿದೆ. ಇನ್ನು ಆತನ ಪಕ್ಕದಲ್ಲಿ ಯುವತಿಯ ಶವ ಪತ್ತೆಯಾಗಿದ್ದು ಇವಳು ಬೆಳ್ತಂಗಡಿ ನಿವಾಸಿ ಎಂದು ಹೇಳಲಾಗುತ್ತಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಇವರ ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Last Updated : Oct 19, 2020, 6:59 PM IST

ABOUT THE AUTHOR

...view details