ಬಂಟ್ವಾಳ(ದಕ್ಷಿಣ ಕನ್ನಡ):ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಬಂಟ್ವಾಳ ಹಾಗೂ ವಿಟ್ಲ ಪೊಲೀಸರು ಕರ್ನಾಟಕ ಕೇರಳ ಗಡಿಭಾಗವಾದ ಕನ್ಯಾನದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಅನಾವಶ್ಯಕವಾಗಿ ಸುತ್ತಾಡುತ್ತಿದ್ದ ವ್ಯಕ್ತಿಯನ್ನು ತಡೆದ ಸಂದರ್ಭದಲ್ಲಿ ಆತ ಪೊಲೀಸ್ ಸಿಬ್ಬಂದಿಯನ್ನು ತಳ್ಳಿ ಗಾಯಗೊಳಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಲಾಕ್ಡೌನ್: ಕರ್ತವ್ಯ ನಿರತ ಪೊಲೀಸರ ಮೇಲೆ ದುರ್ವರ್ತನೆ, ಯುವಕ ಕಂಬಿ ಹಿಂದೆ - ಯುವಕ ಅರೆಸ್ಟ್ ಸುದ್ದಿ
ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಬಂಟ್ವಾಳ ಹಾಗೂ ವಿಟ್ಲ ಪೊಲೀಸರು ಕರ್ನಾಟಕ-ಕೇರಳ ಗಡಿಭಾಗವಾದ ಕನ್ಯಾನದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಯುವಕನೋರ್ವ ದುರ್ವರ್ತನೆ ತೋರಿದ ಆರೋಪ ಕೇಳಿಬಂದಿದೆ. ಅನಾವಶ್ಯಕವಾಗಿ ಸುತ್ತಾಡುತ್ತಿದ್ದ ಈತನನ್ನು ತಡೆದ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಯನ್ನು ತಳ್ಳಿ ಗಾಯಗೊಳಿಸಿದ್ದಕ್ಕೆ ಈಗ ಯುವಕ ಕಂಬಿ ಎಣಿಸುವಂತಾಗಿದೆ.
ಬಂಟ್ವಾಳ
ಇದೀಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿಯಲ್ಲಿ ಮುಚ್ಚಿರಪದವು ನಿವಾಸಿ ಸಿದ್ದಿಕ್ ಯಾನೆ ಅಬೂಬಕರ್ ಸಿದ್ದಿಕ್ (28) ಎಂಬಾತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಕನ್ಯಾನದ ಅಂಗಡಿಯೊಂದರ ಮುಂದೆ ನಿಂತಿದ್ದ ಸಿದ್ದಿಕ್, ಪೊಲೀಸರನ್ನು ನಿಂದಿಸಿದ್ದ. ಈ ವೇಳೆ ಪೊಲೀಸರು ಆತನನ್ನು ಹಿಡಿಯಲು ಹೋದಾಗ ಪೊಲೀಸರನ್ನೇ ಹಳ್ಳಕ್ಕೆ ತಳ್ಳಿ ಗಾಯಗೊಳಿಸಿದ್ದಾನೆ ಎನ್ನಲಾಗ್ತಿದೆ. ಗಾಯಗೊಂಡ ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಚಾರದಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.