ನೆಲ್ಯಾಡಿ (ದಕ್ಷಿಣ ಕನ್ನಡ) :ಮರದ ರೆಂಬೆ ಕಡಿಯಲೆಂದು ಮರವೇರಿದ್ದ ಯುವಕನೋರ್ವ ಆಕಸ್ಮಿಕವಾಗಿ ಕೆಳಗೆ ಜಾರಿ ಬಿದ್ದು ಮೃತಪಟ್ಟ ಘಟನೆ ಜಿಲ್ಲೆಯ ನೆಲ್ಯಾಡಿ ಸಮೀಪದ ಗೋಳಿತ್ತೊಟ್ಟಿನಲ್ಲಿ ನಡೆದಿದೆ.
ಮಾವಿನ ಮರವೇರಿದ್ದ ಯುವಕ ಕಾಲುಜಾರಿ ಕೆಳಗೆ ಬಿದ್ದು ಮೃತ್ಯು - latest crime news
ಮಾವಿನ ಮರವೇರಿದ್ದ ಯುವಕನೋರ್ವ ಆಕಸ್ಮಿಕವಾಗಿ ಕಾಲುಜಾರಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಜಿಲ್ಲೆಯ ನೆಲ್ಯಾಡಿಯಲ್ಲಿ ಸಂಭವಿಸಿದೆ.
ಇಸ್ಮಾಯಿಲ್ (25) ಮೃತಪಟ್ಟ ಯುವಕ
ಕೊಣಾಲು ಗ್ರಾಮದ ಕೋಲ್ಪೆ ದರ್ಖಾಸು ನಿವಾಸಿ ಅಬ್ಬಾಸ್ ಎಂಬವರ ಪುತ್ರ ಇಸ್ಮಾಯಿಲ್ (25) ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ. ಇಸ್ಮಾಯಿಲ್ ಗೋಳಿತ್ತೊಟ್ಟು ಗ್ರಾಮದ ಅಂಬುಡೇಲು ಎಂಬಲ್ಲಿ ಮಾವಿನ ಮರ ಹತ್ತಿ ರೆಂಬೆ ಕಡಿಯುತ್ತಿದ್ದ. ಈ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದನು. ತಕ್ಷಣ ಸ್ಥಳೀಯರು ಯುವಕನನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.