ಮಂಗಳೂರು: ಬಂಟ್ವಾಳ ಪುರಸಭಾ ಸದಸ್ಯೆಯ ಪುತ್ರನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಬಿಮೂಡ ಗ್ರಾಮದ ಅಜ್ಜಿಬೆಟ್ಟುವಿನಲ್ಲಿ ನಡೆದಿದೆ.
ಬಂಟ್ವಾಳ ಪುರಸಭಾ ಸದಸ್ಯೆ ವಿದ್ಯಾವತಿ, ಪ್ರಮೋದ್ ಕುಮಾರ್ ದಂಪತಿ ಪುತ್ರ ಪ್ರಶಾಂತ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ.

ಕೊಲ್ಲಿ ರಾಷ್ಟ್ರದಲ್ಲಿ ಉದ್ಯೋಗಿಯಾಗಿದ್ದ ಪ್ರಶಾಂತ್ ಇತ್ತೀಚೆಗೆ ಊರಿಗೆ ಬಂದಿದ್ದ. ಆದರೆ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮಹಜರು ನಡೆಸಲಾಗಿದೆ.