ಬೆಳ್ತಂಗಡಿ (ದಕ್ಷಿಣಕನ್ನಡ) :ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಯುವತಿ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ನೆಲ್ಯಾಡಿಯಲ್ಲಿ ನಡೆದಿದೆ. ನವೀನ್ ಇಂಟರ್ಲಾಕ್ ಮಾಲೀಕ ವಿ ಜೆ ಜೋಸೆಫ್ ಎಂಬುವರ ಪುತ್ರಿ ನವ್ಯಾ ಜೋಸೆಫ್ (21) ಆತ್ಮಹತ್ಯೆ ಮಾಡಿಕೊಂಡ ಯುವತಿ.
ನೆಲ್ಯಾಡಿ : ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ
ಜನವರಿ 3ರಂದು ರಾತ್ರಿ ಸುಮಾರು 10:30ರ ವೇಳೆಗೆ ತನ್ನ ಕೊಠಡಿಯೊಳಗೆ ಮಲಗಿದ್ದ ನವ್ಯಾ, ಜ.4ರಂದು ಬೆಳಗ್ಗೆ 8 ಗಂಟೆಯಾದ್ರೂ ಬಾಗಿಲು ತೆರೆದಿರಲಿಲ್ಲ. ಇದರಿಂದ ಗಾಬರಿಗೊಂಡ ಪೋಷಕರು, ಆಕೆಯ ಮೊಬೈಲ್ಗೆ ಕರೆ ಮಾಡಿದ್ರೂ ಸ್ವೀಕರಿಸಲಿಲ್ಲ..
ಕಳೆದ ಶೈಕ್ಷಣಿಕ ಸಾಲಿನಲ್ಲಿ ಮಂಗಳೂರು ಸೈಂಟ್ ಅಲೋಸಿಯಸ್ ಕಾಲೇಜಿನಲ್ಲಿ ಬಿಬಿಎ ಪದವಿ ಮುಗಿಸಿದ್ದ ನವ್ಯಾ ಬಳಿಕ ಮನೆಯಲ್ಲಿದ್ದರು. ಜನವರಿ 3ರಂದು ರಾತ್ರಿ ಸುಮಾರು 10:30ರ ವೇಳೆಗೆ ತನ್ನ ಕೊಠಡಿಯೊಳಗೆ ಮಲಗಿದ್ದ ನವ್ಯಾ, ಜ.4ರಂದು ಬೆಳಗ್ಗೆ 8 ಗಂಟೆಯಾದ್ರೂ ಬಾಗಿಲು ತೆರೆದಿರಲಿಲ್ಲ. ಇದರಿಂದ ಗಾಬರಿಗೊಂಡ ಪೋಷಕರು, ಆಕೆಯ ಮೊಬೈಲ್ಗೆ ಕರೆ ಮಾಡಿದ್ರೂ ಸ್ವೀಕರಿಸಲಿಲ್ಲ.
ಬಳಿಕ ತಂದೆ ಜೋಸೆಫ್ ಅವರು ನವ್ಯಾ ಮಲಗಿದ್ದ ಬಾಗಿಲು ಮುರಿದು ಒಳ ಪ್ರವೇಶಿಸಿದಾಗ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳ ಪರಿಶೀಲಿಸಿ, ತನಿಖೆ ಕೈಗೊಂಡಿದ್ದಾರೆ.