ಮಂಗಳೂರು:ನಗರದ ಹೊರವಲಯದಲ್ಲಿರುವ ಗುರುಪುರ ಸೇತುವೆ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾನವೀಯತೆ ತೋರಿದ್ದಾರೆ.
ಗುರುಪುರ ಸೇತುವೆ ಬಳಿ ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ಯುವತಿವೋರ್ವಳು ಗಾಯಗೊಂಡಿದ್ದಳು. ಈ ಸಂದರ್ಭದಲ್ಲಿ ಅದೇ ದಾರಿಯಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಗುರುಪುರ ಮೂಲಕ ಕಂದಾವರಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ತಕ್ಷಣ ಕಾರಿನಿಂದ ಇಳಿದ ನಳಿನ್ ಕುಮಾರ್ ಕಟೀಲ್ ಯುವತಿಯನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.