ಕರ್ನಾಟಕ

karnataka

ETV Bharat / state

ಬಸ್​ನಲ್ಲಿ ವೈದ್ಯ ವಿದ್ಯಾರ್ಥಿನಿಗೆ ಕಿರುಕುಳ: ರೆಡ್​ ಹ್ಯಾಂಡಾಗಿ ಸಿಕ್ಕಿಬಿದ್ದ ಕಾಮುಕ ಪೊಲೀಸರ​ ವಶಕ್ಕೆ - ಪುತ್ತೂರು ಬಸ್ಸಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಕಿರುಕುಳ

ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಖಾಸಗಿ ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಆರೋಪಿಯನ್ನು ಪ್ರಯಾಣಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

young-women-harassed-while-travel-in-bus
ಪುತ್ತೂರು ಬಸ್ಸಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಕಿರುಕುಳ

By

Published : Mar 9, 2021, 3:22 PM IST

ಪುತ್ತೂರು: ಯುವತಿಯರು ಹೆಚ್ಚಾಗಿರುವ ಬಸ್ ಹತ್ತಿ ಕಿರುಕುಳ ಕೊಡುತ್ತಿದ್ದ ಆರೋಪಿವೋರ್ವನನ್ನು ಪ್ರಯಾಣಿಕರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮಾ. 8ರಂದು ಗಡಿಪ್ಪಿಲದಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯನ್ನು ಪುತ್ತೂರಿನ ಬಸ್ ನಿಲ್ದಾಣದ ಬಳಿ ಅಂಗಡಿ ಹೊಂದಿರುವ ಬೆಟ್ಟಂಪಾಡಿಯ ನೌಫಲ್ ಎಂದು ಗುರುತಿಸಲಾಗಿದೆ. ಮಾ.8ರಂದು ಸಂಜೆ ಸವಣೂರು ಮೂಲಕ ಕಡಬ ಹೋಗುತ್ತಿದ್ದ ಬಸ್​ನ್ನು ಏರಿದ್ದ ಆತ, ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಖಾಸಗಿ ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಎನ್ನಲಾಗ್ತಿದೆ. ಈ ವಿಷಯ ತಿಳಿದು ಸಂಘಟನೆಯೊಂದರ ಕಾರ್ಯಕರ್ತರು ಗಡಿಪ್ಪಿಲ ತಲುಪುತ್ತಿದ್ದಂತೆ ಬಸ್ ಅನ್ನು ನಿಲ್ಲಿಸಿ, ಆರೋಪಿಯನ್ನು ವಿಚಾರಿಸಿ ನಂತರ ಸ್ಥಳಕ್ಕೆ ಆಗಮಿಸಿದ ಪುತ್ತೂರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಓದಿ:ಮೈಸೂರಿನ ಪಾರ್ಕ್​ನಲ್ಲಿ ಮಗುವಿಗೆ ಜನ್ಮ ನೀಡಿದ ಕೊಡಗು ಮಹಿಳೆ

ಆರೋಪಿಯನ್ನು ಮಹಿಳಾ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದ್ದು, ಯುವತಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಸಿಬ್ಬಂದಿ ಆರೋಪಿಯನ್ನು ಬಂಧಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details