ಕರ್ನಾಟಕ

karnataka

ETV Bharat / state

ವಿವಾಹ ನಿಶ್ಚಯವಾಗಿದ್ದ ಯುವಕ ಕೆರೆಗೆ ಹಾರಿ ಆತ್ಮಹತ್ಯೆ - Youth commit suicide by jumping into lake

ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಬಾಲಚಂದ್ರ ನಾಲ್ಕು ದಿನಗಳ ಹಿಂದೆಯಷ್ಟೇ ಮನೆಗೆ ಬಂದಿದ್ದರು. ನವೆಂಬರ್ ತಿಂಗಳಿನಲ್ಲಿ ಇವರಿಗೆ ಮದುವೆ ನಿಗದಿಯಾಗಿತ್ತು.

ಕೆರೆಗೆ ಹಾರಿ ಯುವಕ ಆತ್ಮಹತ್ಯೆ..!

By

Published : Oct 6, 2019, 3:44 AM IST

ದಕ್ಷಿಣ ಕನ್ನಡ: ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಕಡಬ ತಾಲೂಕಿನ ಕೊಣಾಜೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಣಾಜೆ ಗ್ರಾಮದ ಹಾಲಾಡಿ ದಿ.ಶೇಷಪ್ಪ ಗೌಡ ಎಂಬುವವರ ಪುತ್ರ ಬಾಲಚಂದ್ರ (31) ಎಂದು ಗುರುತಿಸಲಾಗಿದೆ.

ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಬಾಲಚಂದ್ರ, ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಮನೆಗೆ ಬಂದಿದ್ದ. ಈತನಿಗೆ ನವೆಂಬರ್ ತಿಂಗಳಿನಲ್ಲಿ ಮದುವೆ ನಿಗದಿಯಾಗಿತ್ತು. ಶನಿವಾರ ತನ್ನ ಸಹೋದರನ ಮನೆಗೆ ಹೋಗುವ ದಾರಿಯಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಈ ಕುರಿತು ಉಪ್ಪಿನಂಗಡಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ABOUT THE AUTHOR

...view details