ಕರ್ನಾಟಕ

karnataka

ETV Bharat / state

ಡಿಕೆಶಿಗೆ ಇಡಿ ಸಮನ್ಸ್ ವಿರೋಧಿಸಿ ಮಂಗಳೂರಿನಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ - Congress protests in Mangaluru

ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್​ಗೆ ಇಡಿ ಸಮನ್ಸ್ ನೀಡಿರುವ ಹಿನ್ನಲೆ ಮಂಗಳೂರಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ತನಿಖೆಯ ನೆಪದಲ್ಲಿ ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರಿಗೆ ಹಿಂಸೆ ನೀಡುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಈ ವೇಳೆ ಆರೋಪಿಸಿದರು.

ಯುವ ಕಾಂಗ್ರೆಸ್ ಪ್ರತಿಭಟನೆ

By

Published : Aug 30, 2019, 5:29 PM IST

ಮಂಗಳೂರು: ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್​ಗೆ ಇಡಿ ಸಮನ್ಸ್ ನೀಡಿರುವ ಹಿನ್ನೆಲೆ ದ.ಕ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.

ನಗರದ ಮಲ್ಲಿಕಟ್ಟೆ ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಮಾತನಾಡಿ, ಡಿ.ಕೆ ಶಿವಕುಮಾರ್ ಅಥವಾ ಯಾವುದೇ ಕಾಂಗ್ರೆಸ್ ಮುಖಂಡರನ್ನು ಇಡಿ, ಐಟಿ ತನಿಖೆಯ ನೆಪದಲ್ಲಿ ಹಿಂಸೆ ನೀಡಿದರೆ ತೀವ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಯುವ ಕಾಂಗ್ರೆಸ್ ಪ್ರತಿಭಟನೆ

ಪ್ರತಿಭಟನಾಕಾರರು ರಸ್ತೆ ತಡೆ ಮಾಡಲು ಯತ್ನಿಸಿದಾಗ ಪೊಲೀಸರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದರು.

ABOUT THE AUTHOR

...view details